Home ನಮ್ಮ ಜಿಲ್ಲೆ ಉಡುಪಿ ಧರ್ಮಸ್ಥಳ ಪ್ರಕರಣ: ಮುಸುಕುಧಾರಿ ಬಂಧನ, ಗೃಹ ಸಚಿವರು ಹೇಳಿದ್ದೇನು?

ಧರ್ಮಸ್ಥಳ ಪ್ರಕರಣ: ಮುಸುಕುಧಾರಿ ಬಂಧನ, ಗೃಹ ಸಚಿವರು ಹೇಳಿದ್ದೇನು?

0

ಉಡುಪಿ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂಳಿರುವ ಪ್ರಕರಣದ ದೂರುದಾರ, ಅನಾಮಿಕ ಮುಸುಕುಧಾರಿ ಬಂಧನವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವ‌ರ ಖಚಿತಪಡಿಸಿದರು.

ಉಡುಪಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರುದಾರ ಪೊಲೀಸ್ ಕಸ್ಟಡಿಯಲ್ಲಿದ್ದು, ಆತನ ಹೇಳಿಕೆಯನ್ನು ಪಡೆದು ಹೇಳಿಕೆ ಆಧಾರದಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸಲಿದ್ದಾರೆ ಎಂದರು.

ಧರ್ಮಸ್ಥಳ ಪ್ರಕರಣದ ಬಗೆಗಿನ ಎಸ್‌ಐಟಿ ತನಿಖೆ ಮುಂದುವರಿಯಲಿದೆ. ಸಮಗ್ರ ತನಿಖೆ ನಡೆದು ವರದಿ ಬಂದ ಬಳಿಕವಷ್ಟೇ ಎಲ್ಲಾ ಊಹಾಪೋಹಗಳಿಗೂ ತೆರೆ ಬೀಳಿದೆ ಎಂದು ಹೇಳಿದರು. ಅನನ್ಯ ಭಟ್ ನಾಪತ್ತೆ ಪ್ರಕರಣದ ದೂರುದಾರೆ ಸುಜಾತಾ ಭಟ್ ಮೇಲೆಯೂ ಎಸ್‌ಐಟಿ ತಂಡ ತನಿಖೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದರು.

ಶನಿವಾರ ಬೆಳಗ್ಗೆ ಎಸ್‌ಐಟಿ ಪೊಲೀಸರು ದೂರುದಾರ ಸಿ.ಎನ್‌.ಚಿನ್ನಯ್ಯ ಬಂಧಿಸಿದ್ದರು. ಪೊಲೀಸರು ಬೆಳ್ತಂಗಡಿ ಕೋರ್ಟ್‌ಗೆ ಚಿನ್ನಯ್ಯ ಹಾಜರುಪಡಿಸಿದ್ದರು. ಕೋರ್ಟ್ 10 ದಿನಗಳ ಕಾಲ ಆರೋಪಿಯನ್ನು ಎಸ್‌ಐಟಿ ವಶಕ್ಕೆ ನೀಡಿ ಆದೇಶವನ್ನು ಹೊರಡಿಸಿದೆ.

ಮಂಡ್ಯ ಮೂಲಕ ಸಿ.ಎನ್.ಚಿನ್ನಯ್ಯ ಸಿ.ಎನ್.ಚಿನ್ನಯ್ಯ ಧರ್ಮಸ್ಥಳದಲ್ಲಿ 1995 ರಿಂದ 2014ರ ತನಕ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದ. ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ.

ನಿಯಮ ಸರಳೀಕರಣ: ಕರಾವಳಿ ಜಿಲ್ಲೆಯ ಧಾರ್ಮಿಕ ಆಚರಣೆಗಳಿಗೆ ವಿಧಿಸಿರುವ ನಿಯಮಗಳನ್ನು ಸರಳಗೊಳಿಸುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವ‌ರ ಹೇಳಿದರು.

ಕರಾವಳಿಯಲ್ಲಿ ಧಾರ್ಮಿಕ ಆಚರಣೆಗಳಿಗೆ ವಿಧಿಸಿರುವ ನಿಯಮಗಳನ್ನು ಸರಳಗೊಳಿಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ‌ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದರು.

ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಲು ಜನರ ಹಿತದೃಷ್ಟಿಯಿಂದ ಕಾನೂನಿನ ಚೌಕಟ್ಟಿನಲ್ಲಿ ಕೆಲವೊಂದು ನಿಯಮಗಳನ್ನು ಮಾಡಲಾಗಿದೆ. ಅದರಿಂದ ಜನರಿಗೆ ತೊಂದರೆಯಾಗುತ್ತದೆ ಎಂದಾದರೆ ಅದನ್ನು ಸರಿಪಡಿಸಿಕೊಳ್ಳಲಾಗುವುದು. ಈ ಬಗ್ಗೆ ಮಂಗಳೂರಿನಲ್ಲಿ ಸಂಜೆ ಅಧಿಕಾರಿಗಳ ಸಭೆ ಕರೆದಿದ್ದು, ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಗೃಹಸಚಿವ ಪರಮೇಶ್ವರ ಹೇಳಿದರು.

NO COMMENTS

LEAVE A REPLY

Please enter your comment!
Please enter your name here

Exit mobile version