SK Home Ad
Home ನಮ್ಮ ಜಿಲ್ಲೆ ಉಡುಪಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

0
69

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿ ಆಶೀರ್ವಾದ ಪಡೆದರು.

ಉಡುಪಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗವಹಿಸಿದರು. ಭಕ್ತಿಭಾವದಿಂದ ದೇವರ ದರ್ಶನ ಪಡೆದ ಅವರು ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಹಾಗೂ ಆಶೀರ್ವಾದ ಸ್ವೀಕರಿಸಿದರು.

ಪ್ರಸ್ತುತ ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯವನ್ನು ಶೀರೂರು ಮಠ ವಹಿಸಿಕೊಂಡಿದ್ದು, ಪರ್ಯಾಯ ಪೀಠಾಧೀಶರಾಗಿ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಧಾರ್ಮಿಕ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರು ಮಠದ ಧಾರ್ಮಿಕ ಸಂಪ್ರದಾಯಗಳು ಹಾಗೂ ಪರ್ಯಾಯ ವ್ಯವಸ್ಥೆಯ ಕುರಿತು ಮಾಹಿತಿಯನ್ನು ಪಡೆದುಕೊಂಡರು.

ಭೇಟಿಯ ಸಂದರ್ಭದಲ್ಲಿ ಶೀರೂರು ಮಠದ ದಿವಾನ ಡಾ. ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಬಿಜೆಪಿ ವಕ್ತಾರ ಮಧುಕರ ಮುದ್ರಾಡಿ ಉಪಸ್ಥಿತರಿದ್ದರು.

ಶ್ರೀಕೃಷ್ಣ ಮಠದಲ್ಲಿ ಕೆಲಕಾಲ ಕಾಲ ಕಳೆಯಿದ ಸಚಿವೆ, ದೇವರ ದರ್ಶನದ ಬಳಿಕ ಭಕ್ತರು ಹಾಗೂ ಮಠದ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಉಡುಪಿ ಶ್ರೀಕೃಷ್ಣ ಮಠವು ದೇಶದ ಪ್ರಮುಖ ವೈಷ್ಣವ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದ್ದು, ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ.