ಉಡುಪಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್.ಡಿ.ಪಿಐ ರಾಜ್ಯ ನಾಯಕ ರಿಯಾಜ್ ಕಡಂಬುನನ್ನು ಶುಕ್ರವಾರ ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಆತ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದು, ಜಾಮೀನು ಷರತ್ತು ಉಲ್ಲಂಘಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆ ಹಿನ್ನೆಲೆಯಲ್ಲಿ ಠಾಣೆಗೆ ಹಾಜರಾದ ರಿಯಾಜ್ ಕಡಂಬುನನ್ನು ಉಡುಪಿ ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.