Home ನಮ್ಮ ಜಿಲ್ಲೆ ಉಡುಪಿ PMEGP ಯೋಜನೆ ಸಬ್ಸಿಡಿ ಕೊಡಿಸುವುದಾಗಿ 1 ಕೋಟಿಗೂ ಅಧಿಕ ವಂಚನೆ

PMEGP ಯೋಜನೆ ಸಬ್ಸಿಡಿ ಕೊಡಿಸುವುದಾಗಿ 1 ಕೋಟಿಗೂ ಅಧಿಕ ವಂಚನೆ

0

ಉಡುಪಿ: ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆಯಡಿ ಸಬ್ಸಿಡಿ ಸಾಲ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣದ ಆರೋಪಿ‌ ಕೌಶಲ್ಯ ಎಂಬಾಕೆಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

2023ರ ನವೆಂಬರ್‌ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್ ಎಂಬವರಿಗೆ ಪಿಎಂಇಜಿಪಿ ಯೋಜನೆಯಡಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿದ್ದು ನಂತರದ ದಿನಗಳಲ್ಲಿ ಸಬ್ಸಿಡಿ ಲೋನ್ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು.

ಅದರಂತೆ ಸರಿತಾ ಲೂವಿಸ್ ಹಂತ ಹಂತವಾಗಿ ಕೌಶಲ್ಯ ಖಾತೆಗೆ ಹಾಗೂ ಆಕೆ ತಿಳಿಸಿದ ವ್ಯಕ್ತಿಗಳಾದ ಆಕೆಯ ಗಂಡ ಸಂದೇಶ, ಪ್ರಕಾಶ, ಆಶೀಶ ಶೆಟ್ಟಿ, ರಾಜೇಂದ್ರ ಬೈಂದೂರು, ಗೀತಾ, ಹರಿಣಿ, ನವ್ಯ, ಕುಮಾರ್, ಮಾಲತಿ, ಪ್ರವೀಣ್, ಹರಿಪ್ರಸಾದ್, ನಾಗರಾಜ ಮತ್ತು ಭಾರತಿ ಸಿಂಗ್ ಎಂಬವರಿಗೆ ಒಟ್ಟು 80 ಲಕ್ಷ 72 ಸಾವಿರ ರೂ. ಹಣ ನೀಡಿದ್ದರು ಎಂದು ದೂರಲಾಗಿದೆ.

ಅದೇ ರೀತಿ ಕೌಶಲ್ಯ, ಅಂಜಲಿನ್ ಡಿ’ಸಿಲ್ವಾ ಎಂಬವರಿಗೂ ಪಿಎಂಇಜಿಪಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಸರಿತಾ ಲೂವಿಸ್’ಗೆ ತಿಳಿಸಿದ ವ್ಯಕ್ತಿಗಳ ಖಾತೆಗಳಿಗೆ 65 ಲಕ್ಷ ರೂ. ನಗದು ಹಣ ಪಾವತಿಸಿದ್ದರು. ಕೌಶಲ್ಯ ಅವರಿಬ್ಬರಿಗೆ ಒಟ್ಟು 4 ಕೋಟಿ ಸಬ್ಸಿಡಿ ಸಾಲ ಮಾಡಿಸಿಕೊಡುವುದಾಗಿ ನಂಬಿಸಿ ಹಾಗೂ ಬ್ಯಾಂಕ್ ನೌಕರ ಎಂದು ದೂರವಾಣಿಯಲ್ಲಿ ಮಾತನಾಡಿ ನಂಬಿಸಿ ಒಟ್ಟು 1 ಕೋಟಿ 45 ಲಕ್ಷ 72 ಸಾವಿರ ರೂ. ಹಣ ಪಡೆದು ಮೋಸ ಮಾಡಿರುವುದಾಗಿ ದೂರಲಾಗಿದೆ.

ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿ ಕೌಶಲ್ಯಳನ್ನು ಬಂಧಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version