Home ನಮ್ಮ ಜಿಲ್ಲೆ ಉಡುಪಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು

ಟ್ರೆಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು

0
ಟ್ರೆಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು

ಕುಂದಾಪುರ: ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ. 1ರ ರವಿವಾರ ನಡೆದಿದೆ.

ಕುಂದಾಪುರ ನಗರದ ಪುರಸಭಾ ಮುಖ್ಯ ರಸ್ತೆಯ ಹಳೆ ಬಸ್‌ ನಿಲ್ದಾಣದ ಸಮೀಪ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದ ಶುಭಶ್ರೀ ಕಾರಂತ್ (53) ಹೀಗೆ ಬಲಿಯಾದವರು. ಹೊಸಂಗಡಿ ಬಳಿಯ ಮೆಟ್ಕಲ್ ಗುಡ್ಡೆಗೆ ಚಾರಣದ ತಂಡದೊಟ್ಟಿಗೆ ಈಕೆ ತೆರಳಿದ್ದರು. ಸಾಗುತ್ತಿರುವಾಗ ನದಿಯಲ್ಲಿ ಮುಳುಗಿ ಮೃತ ಪಟ್ಟಿದ್ದಾರೆಂದು ತಿಳಿದುಬಂದಿದೆ.

ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.