SK Home Ad
Home ನಮ್ಮ ಜಿಲ್ಲೆ ಉತ್ತರ ಕನ್ನಡ ಕಪ್ಪೆಚಿಪ್ಪು ಸಂಗ್ರಹಕ್ಕೆ ತೆರಳಿದ್ದ 8 ಮಂದಿ ಜಲಸಮಾಧಿ

ಕಪ್ಪೆಚಿಪ್ಪು ಸಂಗ್ರಹಕ್ಕೆ ತೆರಳಿದ್ದ 8 ಮಂದಿ ಜಲಸಮಾಧಿ

0
66

ಕಾರವಾರ: ಕಪ್ಪೆಚಿಪ್ಪು(Shells) ಸಂಗ್ರಹಿಸಲು ವೆಂಕಟಾಪುರ ನದಿಗೆ ತೆರಳಿದ್ದ ವೇಳೆ ದಿಢೀರ್ ನೀರು ಏರಿಕೆಯಾಗಿ ಸಂಭವಿಸಿದ ದುರ್ಘಟನೆಯಲ್ಲಿ 8 ಜನರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ತಟ್ಟಿ ಹಕ್ಕಲು ಪ್ರದೇಶದಲ್ಲಿ ನಡೆದಿದೆ.

​ಘಟನೆಯ ವಿವರ: ಒಟ್ಟು 14 ಜನರ ತಂಡವು ಕಪ್ಪೆಚಿಪ್ಪುಗಳನ್ನು ಸಂಗ್ರಹಿಸಲು ವೆಂಕಟಾಪುರ ನದಿಗೆ ತೆರಳಿತ್ತು. ಈ ವೇಳೆ ನದಿಯಲ್ಲಿ ನೀರಿನ ಮಟ್ಟ ದಿಢೀರನೆ ಏರಿಕೆಯಾದ ಕಾರಣ, ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

7 ಜನ ಮಹಿಳೆಯರು ಮತ್ತು ಓರ್ವ ಪುರುಷ ಸೇರಿ ​ಒಟ್ಟು 8 ಮಂದಿ ಮೃತಪಟ್ಟಿದ್ದು, ಓರ್ವ ಮಹಿಳೆ ಮತ್ತು ಓರ್ವ ಪುರುಷ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ರಕ್ಷಿಸಲಾಗಿದೆ. ಈ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದು, ಅವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತಪಟ್ಟವರೆಲ್ಲ ಭಟ್ಕಳದ ಪಡುಶಿರಾಲಿ ಶಾರದಹೊಳೆ ನಿವಾಸಿಗಳಾಗಿದ್ದಾರೆ. ಲಕ್ಷ್ಮಿ ಮಾದೇವ ನಾಯ್ಕ (38), ಲಕ್ಷ್ಮಿ ಮಹಾದೇವ ನಾಯ್ಕ, ಲಕ್ಷ್ಮಿ ಶಿವರಾಂ ನಾಯ್ಕ (39), ಉಮೇಶ್ ಮಂಜುನಾಥ್ ನಾಯ್ಕ (42), ಮಾಸ್ತಮ್ಮ ಮಂಜುನಾಥ್ ನಾಯ್ಕ (43), ಲಕ್ಷ್ಮಿ ಅಣ್ಣಪ್ಪ ನಾಯ್ಕ (44), ಜ್ಯೋತಿ ನಾಗಪ್ಪ ನಾಯ್ಕ (37) ಮತ್ತು ಮಾಲತಿ ಜಟ್ಟಪ್ಪ ನಾಯ್ಕ (38) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಭಟ್ಕಳ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಭಟ್ಕಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.