ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಲಾರಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೂಡಲೇ ಅಂಕೋಲಾ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾದಿಂದ ಯಲ್ಲಾಪುರ ಕಡೆಗೆ ಹೋಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ, ಎದುರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.
ಈ ದುರಂತದಲ್ಲಿ ಲಾರಿ ಚಾಲಕ ಮತ್ತು ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅಂಕೋಲಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.