ಭಟ್ಕಳ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

ಕಾರವಾರ: ಕಪ್ಪೆಚಿಪ್ಪು ಸಂಗ್ರಹಿಸಲು ವೆಂಕಟಾಪುರ ನದಿಗೆ ತೆರಳಿದ್ದ ವೇಳೆ ದುರ್ಮರಣಕ್ಕೀಡಾದ 8 ಜನರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ. … Continue reading ಭಟ್ಕಳ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ