ಉತ್ತರ ಕನ್ನಡ: ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನ ಆಚರಣೆ

0
47

ದಾಂಡೇಲಿ: ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ತಹಶೀಲ್ದಾರ್‌ ನಿಶ್ಚಲ ನರೋನ್ಹಾ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನಾರಾಯಣ ಗುರುಗಳ ಕುರಿತು ಉಪನ್ಯಾಸ ನೀಡಿದ ಕ.ಸಾ.ಪ. ತಾಲೂಕಾಧ್ಯಕ್ಷ ರಾಮಾ ನಾಯ್ಕ ಮಾತನಾಡಿ, ನಾರಾಯಣ ಗುರುಗಳು ಸಮಾಜ ಪರಿವರ್ತಕರಾಗಿ, ಸಮಾಜ ಸುಧಾರಕರಾಗಿ, ಧಾರ್ಮಿಕ ಚಿಂತಕರಾಗಿ ಆಸ್ಪಶ್ಯತೆ ಹಾಗೂ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಶ್ರಮಿಸಿದವರು. ಅವರು ಒಂದೇ ಜಾತಿ, ಒಂದೇ ಧರ್ಮಕ್ಕೆ ಸೀಮಿತರಾದವಲ್ಲ. ಇಡೀ ಮಾನವಕುಲಕ್ಕೆ ದಿವ್ಯ ಸಂದೇಶ ನೀಡಿದವರಾಗಿದ್ದು, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ತತ್ವದೊಂದಿಗೆ ದೇವಾಲಯಗಳನ್ನು ನಿರ್ಮಿಸಿ ಹಿಂದುಳಿದ ವರ್ಗದ ಜನರಿಗೆ ಪ್ರವೇಶ ನೀಡಿ ಅವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಪ್ರಯತ್ನ ಮಾಡಿದವರು. ಶಿಕ್ಷಣಕ್ಕೆ ಮಹತ್ವ ನೀಡಿ ಶೈಕ್ಷಣಿಕ ಸಂಸ್ಥೆಗಳನ್ನು ನಿರ್ಮಿಸಿದ್ದಾರೆ. ಅವರ ತತ್ವ ಸಿದ್ದಾಂತದಂತೆ ಎಲ್ಲಾ ಹಿಂದುಳಿದ ವರ್ಗದವರು ನಾವೆಲ್ಲ ಒಂದೇ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ನಾಮಧಾರಿ ಸಮಾಜದ ಉಪಾಧ್ಯಕ್ಷ ಸುನೀಲ ಸೋನಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಕುರಿತು ವಿವರಿಸಿ, ಅವರ ಆದರ್ಶಗಳು ಬದುಕಿನ ದಾರಿ ದೀಪವಾಗಿದೆ ಎಂದರು.

Previous articleಮೈಸೂರು ದಸರಾ–2025: ಟಿಕೆಟ್ ಹಾಗೂ ಗೋಲ್ಡ್ ಕಾರ್ಡ್ ಬಿಡುಗಡೆ
Next articleದಾವಣಗೆರೆ: ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದರೆ ಮಾತ್ರ ಗ್ಯಾರಂಟಿ – ಶಾಸಕ ಕೆ.ಎಸ್. ಬಸವಂತಪ್ಪ

LEAVE A REPLY

Please enter your comment!
Please enter your name here