ದಾಂಡೇಲಿ: ರಸ್ತೆ ಅಪಘಾತದಲ್ಲಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಗಂಭೀರ ಗಾಯ

0
16

ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ನಗರಸಭೆ ಸದಸ್ಯರಾದ ಮೋಹನ ಹಲವಾಯಿ ಅವರು ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡ ಧಾರವಾಡದ ಎಸ್.ಡಿ.ಎಂ.ಆಸ್ಪತ್ರೆಗೆ ದಾಖಲಿಸಿದ ಘಟನೆ ಇಂದು ಜರುಗಿದೆ.

 ಮೋಹನ ಹಲವಾಯಿ  ಬೆಳಿಗ್ಗೆ 9-30 ರ ಸುಮಾರಿಗೆ ದಾಂಡೇಲಿಯ ಮುಖ್ಯ ಅಂಚೆ ಕಛೇರಿ ಹತ್ತಿರದ ಬರ್ಚಿ ರಸ್ತೆಯಲ್ಲಿ ಸ್ಕೂಟಿ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಟ್ರಾಕ್ಟರ್ ಟೈರ್ ಕೆಳಗೆ ಸ್ಕೂಟಿ ಸಮೇತ ಸಿಲುಕಿದ್ದಾರೆನ್ನಲಾಗಿದೆ.

ಅವರ ತಲೆ ಮತ್ತು ಮುಖಕ್ಕೆ ತೀವ್ರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಅವರನ್ನು ದಾಂಡೇಲಿ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಗಂಭೀರ ಸ್ವರೂಪದ ಪೆಟ್ಟು ಬಿದ್ದಿರುವ ಹಿನ್ನಲೆಯಲ್ಲಿ ಅವರನ್ನು ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಾಕ್ಟರ್ ಚಾಲಕನ ನಿರ್ಲಕ್ಷತನದ ಚಾಲನೆ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಸ್ಥಳೀಯ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

Previous articleBengaluru: ಹದ್ದು ಮೀರಿ ಕಾಡಿದ ಕಾಮುಕ: ಖೆಡ್ಡಾಗೆ ಕೆಡವಿದ ಕಿರುತೆರೆ ನಟಿ!
Next articleಹಳ್ಳಿಗೆ ಬಸ್ಸಿಲ್ಲ, ರಾಜಧಾನಿಗೆ ರಸ್ತೆ ಇಲ್ಲ: ಸರ್ಕಾರದ ವಿರುದ್ಧ ವಿಪಕ್ಷ ನಾಯಕನ ತೀವ್ರ ವಾಗ್ದಾಳಿ

LEAVE A REPLY

Please enter your comment!
Please enter your name here