ಅಂಕೋಲಾ: ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಶುಕ್ರವಾರ ಅಂಕೋಲಾ ತಾಲೂಕಿನ ಅಂದ್ಲೆಯ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸೇವೆಗೆ ಮುಂದಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ದಕ್ಷಿಣದ ಕಾಶಿ ಎಂದೇ ಗುರುತಿಸಿಕೊಂಡಿರುವ ಶ್ರೀಕ್ಷೇತ್ರ ಗೋಕರ್ಣಕ್ಕೆ ಡಿ. 19ರಂದು ಡಿಸಿಎಂ ಡಿ.ಕೆ. ಶಿವಕುಮಾರ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೂಕ್ತ ಭದ್ರತಾ ಏರ್ಪಾಡುಗಳನ್ನು ಮಾಡಿಕೊಂಡಿದೆ.
ಇವೆಲ್ಲವುಗಳ ನಡುವೆ ಅಂಕೋಲಾ ತಾಲೂಕಿನ ಅಂದ್ಲೆಯ ಗುಡ್ಡಗಾಡು ಪ್ರದೇಶದಲ್ಲಿರುವ ಜಗದೀಶ್ವರಿ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭೇಟಿ ನೀಡುತ್ತಿರುವುದು ತೀವ್ರ ಕುತೂಹಲಕ್ಕೆಡೆ ಮಾಡಿಕೊಟ್ಟಿದೆ.
ಇದನ್ನೂ ಓದಿ: ಜಾಮೀನು ಸಿಕ್ಕು 24 ದಿನಗಳ ಬಳಿಕ ಮಾಸ್ಕ್‌ಮ್ಯಾನ್ ಚಿನ್ನಯ್ಯ ರಿಲೀಸ್
4 ವರ್ಷಗಳ ಹಿಂದೆ ಇಡಿ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಸಂಕಷ್ಟದಿಂದ ಪಾರು ಮಾಡುವಂತೆ ಅವರ ಬೆಂಬಲಿಗರು ಇದೇ ಆಂದ್ಲೆಯ ಜಗದೀಶ್ವರಿ ದೇವಿಗೆ ಮೊರೆ ಹೋಗಿದ್ದರು.
ನಂತರದ ದಿನಗಳಲ್ಲಿ ನ್ಯಾಯಾಲಯದಿಂದ ಡಿ.ಕೆ. ಶಿವಕುಮಾರ ಅವರಿಗೆ ಜಾಮೀನು ದೊರೆತು ಸಮಸ್ಯೆಯಿಂದ ಪಾರಾಗಿದ್ದರು. ಈ ಹಿನ್ನೆಲೆಯಲ್ಲಿ ಡಿಕೆಶಿ ಅವರು ದೇಗುಲಕ್ಕೆ ಭೇಟಿ ನೀಡಿ ಹರಕೆಯನ್ನು ಒಪ್ಪಿಸಿ ತೆರಳಿದ್ದರು. ಆದಾದ ಬಳಿಕ ಈಗ ಉಪಮುಖ್ಯಮಂತ್ರಿಯಾಗಿ ದೇವಾಲಯಕ್ಕೆ ಆಗಮಿಸುತ್ತಿದ್ದಾರೆ.























