Home ನಮ್ಮ ಜಿಲ್ಲೆ ಉತ್ತರ ಕನ್ನಡ ಉತ್ತರ ಕನ್ನಡ: ಗಣೇಶ ಹಬ್ಬ, ಈದ್ ಮಿಲಾದ್ ಆಚರಣೆ, ಡಿಜೆ ಬಳಸುವಂತಿಲ್ಲ

ಉತ್ತರ ಕನ್ನಡ: ಗಣೇಶ ಹಬ್ಬ, ಈದ್ ಮಿಲಾದ್ ಆಚರಣೆ, ಡಿಜೆ ಬಳಸುವಂತಿಲ್ಲ

0

ದಾಂಡೇಲಿ : ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಷ್ಟ 27 ರಂದು ಆಚರಿಸುವ ಗಣೇಶ ಚತುರ್ಥಿ ಹಬ್ಬ ಮತ್ತು ಸೆಪ್ಟಂಬರ್ 5 ರ ಈದ್ ಮಿಲಾದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಪರಿಸರ ಸ್ನೇಹಿಯಾಗಿ ಆಚರಣೆ ಮಾಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಶನಿವಾರ (ಇಂದು) ಜರುಗಿದ ಸೌಹಾರ್ದ ಸಭೆಯಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಮಾತನಾಡಿ ನಿಗಧಿಗಿಂತ ಹೆಚ್ಚು ಶಬ್ದ ಮಾಡುವ ಧ್ವನಿವರ್ಧಕ ಬಳಸುವಂತಿಲ್ಲ. ಸುಪ್ರೀಂ ಕೋರ್ಟಿನ ಆದೇಶವಿದೆ. ಸುಪ್ರೀಂ ಕೋರ್ಟಿನ ಸೂಚನೆಯಂತೆ ಡಿಜೆ ಸೌಂಡ್ ಸಿಸ್ಟಮ್‌ಗಳ ಬಳಕೆಯನ್ನು ಹಬ್ಬದಲ್ಲಿ, ಸಾರ್ವಜನಿಕ ಮೆರವಣಿಗೆಯಲ್ಲಿ ಮಾಡುವಂತಿಲ್ಲ ಜಿಲ್ಲಾಧಿಕಾರಿ ಎಚ್ಚರಿಸಿದರು. ಆಸ್ಪತ್ರೆ, ಶಾಲೆ, ನ್ಯಾಯಾಲಯ ಇರುವ ಪ್ರದೇಶದಲ್ಲಿ ಧ್ವನಿವರ್ಧಕ ಬಳಸಬಾರದು. ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಾಗ ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು.

ಪಿಓಪಿ ಮತ್ತು ರಾಸಾಯನಿಕ ಬಣ್ಣಗಳನ್ನು ಬಳಸಿರುವ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ. ವಸ್ತುಗಳ ಬಳಕೆ ಆಗದಂತೆ ನೋಡಿಕೊಳ್ಳಬೇಕು. ವಿದ್ಯುತ್ ಅನಾಹುತಗಳಾಗದಂತೆ ಜಾಗ್ರತೆ ವಹಿಸಬೇಕು. ಹೆಸ್ಕಾಂ ವತಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ತ್ಯಾಜ್ಯ ಉತ್ಪತ್ತಿಯಾಗದಂತೆ ಸ್ಥಳೀಯಾಡಳಿತ ಸೂಕ್ತ ಕ್ರಮ ಜರುಗಿಸಬೇಕು. ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಾಗ ಸಿಂಗಲ್ ವಿಂಡೋ ವ್ಯವಸ್ಥೆಯಡಿ ಎಲ್ಲಾ ಅಗತ್ಯ ಅನುಮತಿಗಳನ್ನು ಪಡೆಯುವಂತೆ ತಿಳಿಸಿದರು.

ಮೆರವಣಿಗೆ ವಿಸರ್ಜನೆ ಸಂಧರ್ಭದಲ್ಲಿ ಮದ್ಯದಂಗಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುವದು. ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್ ರೂಂ 9483511 015 ಮತ್ತು ಪೋಲಿಸ್ ಸಹಾಯವಾಣಿ 112ನ್ನು 24 ತಾಸು ಇರುವ ಸಹಾಯವಾಣಿ ಸಂಪರ್ಕಿಸಬಹುದು. ಯಾವುದೇ ಹಂತದಲ್ಲೂ ಕಾನೂನು ಉಲ್ಲಂಘನೆ ಮತ್ತು ಶಾಂತಿ ಸುವ್ಯವಸ್ಥೆಗೆ ತೊಂದರೆಯಾಗದಂತೆ ಶಾಂತಿಯುತವಾಗಿ ಎರಡು ಹಬ್ಬಗಳನ್ನು ಆಚರಿಸುವಂತೆ ಉಭಯ ಕೋಮುಗಳ ಮುಖಂಡರಿಗೆ ಎಸ್.ಪಿ. ದೀಪನ್ ಮನವಿ ಮಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version