SK Home Ad
Home ನಮ್ಮ ಜಿಲ್ಲೆ ಉತ್ತರ ಕನ್ನಡ ಜ್ಯೋತಿಷಿ ಕಮಲಾಕರ್ ಸೇರಿ ಆರು ಆರೋಪಿಗಳಿಗೆ ಮಧ್ಯಂತರ ಜಾಮೀನು

ಜ್ಯೋತಿಷಿ ಕಮಲಾಕರ್ ಸೇರಿ ಆರು ಆರೋಪಿಗಳಿಗೆ ಮಧ್ಯಂತರ ಜಾಮೀನು

0
193

ಉತ್ತರ ಕನ್ನಡ: ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ನಡೆದ ವಸಂತ್ ನಾಯ್ಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಆರು ಆರೋಪಿಗಳಿಗೆ ಧಾರವಾಡ ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ಕಮಲಾಕರ್ ಭಟ್ ಸೇರಿದಂತೆ ಒಂಬತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಹಿಂದೆ ಶಿರಸಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದ ಮೊದಲ ಆರೋಪಿ ಸುಚಿತ್ರಾ ಹಾಗೂ ಆಕೆಯ ತಂದೆ-ತಾಯಿಯನ್ನು ಹೊರತುಪಡಿಸಿ ಉಳಿದ ಆರು ಆರೋಪಿಗಳಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

ಕಮಲಾಕರ್ ಭಟ್ ವಿರುದ್ಧ ಕೊಲೆ ಪ್ರಕರಣದ ಜೊತೆಗೆ ಪೋಕ್ಸೋ ಕಾಯ್ದೆಯಡಿ ಮತ್ತೊಂದು ಪ್ರಕರಣವೂ ದಾಖಲಾಗಿದ್ದು, ಸಂಬಂಧಿತ ನ್ಯಾಯಾಂಗ ಪ್ರಕ್ರಿಯೆಗಳು ಮುಂದುವರಿದಿವೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಮುಂದಿನ ತಿಂಗಳಿಗೆ ಮುಂದೂಡಿದೆ.