SK Home Ad
Home ನಮ್ಮ ಜಿಲ್ಲೆ ಉತ್ತರ ಕನ್ನಡ ವಿದ್ಯಾರ್ಥಿಗಳ ಶೈಕ್ಷಣೀಕ ಪ್ರಗತಿಗೆ ʼಜಾಣರ ಗುರುʼ ಪತ್ರಿಕೆ ನೆರವು

ವಿದ್ಯಾರ್ಥಿಗಳ ಶೈಕ್ಷಣೀಕ ಪ್ರಗತಿಗೆ ʼಜಾಣರ ಗುರುʼ ಪತ್ರಿಕೆ ನೆರವು

0
110

ದಾಂಡೇಲಿ, (ಉತ್ತರ ಕನ್ನಡ): ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಪರೀಕ್ಷಾ ಸಿದ್ಧತೆಗೆ ನೆರವಾಗುವ ಉದ್ದೇಶದಿಂದ ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ವಿದ್ಯಾರ್ಥಿ ಮಾರ್ಗದರ್ಶಿಕೆ ‘ಜಾಣರ ಗುರು’ ಪತ್ರಿಕೆಯನ್ನು ದಾಂಡೇಲಿಯ ವಿವಿಧ ಶಾಲೆಗಳ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸುವ ಮಹತ್ವದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ನಗರದ ಜನತಾ ವಿದ್ಯಾಲಯ ಪ್ರೌಢಶಾಲೆ ಮತ್ತು ಜ್ಯೂನಿಯರ್ ಕಾಲೇಜು, ಕನ್ಯಾ ವಿದ್ಯಾಲಯ ಪ್ರೌಢಶಾಲೆ, ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿಗಳಿಗೆ ಈ ಸೌಲಭ್ಯ ದೊರೆಯಲಿದೆ. ನಗರದ ಏಳು ಗಣ್ಯ ಪ್ರಾಯೋಜಕರ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ವಿದ್ಯಾರ್ಥಿಗಳಿಗೆ ‘ಜಾಣರ ಗುರು’ ಪತ್ರಿಕೆಯನ್ನು ಉಚಿತವಾಗಿ ವಿತರಿಸಲಾಗುತ್ತದೆ.

ಇದನ್ನೂ ಓದಿ: ಡಿಕೆಶಿ ಸಮಗ್ರ ಕರ್ನಾಟಕದ ಮುಖ್ಯಮಂತ್ರಿ ಆದಾರ?

ಈ ಯೋಜನೆಯು ವಿದ್ಯಾರ್ಥಿಗಳಲ್ಲಿ ಓದುವ ಅಭ್ಯಾಸ ಬೆಳೆಸುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ಸಿದ್ಧತೆಗೆ ಅಗತ್ಯವಾದ ಮಾಹಿತಿ ಹಾಗೂ ಮಾರ್ಗದರ್ಶನವನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಕಾರ್ಯಕ್ರಮದ ಅಂಗವಾಗಿ ಹಳೇ ದಾಂಡೇಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಸರಳ ಸಮಾರಂಭ ಏರ್ಪಡಿಸಲಾಗಿತ್ತು. ಹಿರಿಯ ಪತ್ರಕರ್ತ ಎನ್. ಜಯಚಂದ್ರನ್ ಅವರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ‘ಜಾಣರ ಗುರು’ ಪತ್ರಿಕೆಯನ್ನು ವಿತರಿಸಿ ಮಾತನಾಡಿದರು.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ರಾಮಲಿಂಗಾ ರೆಡ್ಡಿ

ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪತ್ರಿಕೆಯಲ್ಲಿ ಪ್ರಕಟವಾಗುವ ಶೈಕ್ಷಣಿಕ ಮಾಹಿತಿ, ಪ್ರಶ್ನೋತ್ತರಗಳು, ಪರೀಕ್ಷಾ ಮಾರ್ಗದರ್ಶನ ಹಾಗೂ ಸಮಕಾಲೀನ ವಿಷಯಗಳ ಅಧ್ಯಯನದ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಇದು ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಕಲ್ಪನಾ ನಾಯಕ ವಹಿಸಿದ್ದರು. ಪತ್ರಿಕೆ ವಿತರಕರಾದ ರವಿ ಕಾಳೆ ಹಾಗೂ ಶಾಲೆಯ ಶಿಕ್ಷಕ ವೃಂದ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಉಪಕ್ರಮವು ಗ್ರಾಮೀಣ ಹಾಗೂ ನಗರ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೈಕ್ಷಣಿಕ ಮಾಹಿತಿ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಹೆಚ್ಚಿಸಲು ಸಹಕಾರಿ ಆಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.