Home ನಮ್ಮ ಜಿಲ್ಲೆ ಉತ್ತರ ಕನ್ನಡ ಕೊಂಕಣ ರೈಲ್ವೆ: ಹಲವು ರೈಲು ಸೇವೆ ವಿಸ್ತರಣೆ, ಪಟ್ಟಿ

ಕೊಂಕಣ ರೈಲ್ವೆ: ಹಲವು ರೈಲು ಸೇವೆ ವಿಸ್ತರಣೆ, ಪಟ್ಟಿ

0

ಕೊಂಕಣ ರೈಲು ಬಳಕೆದಾರರಿಗೆ ಸಿಹಿಸುದ್ದಿ. ಗೋವಾದ ಮಡಗಾಂವ್‌ನಲ್ಲಿ ನಡೆದ ಕೊಂಕಣ ರೈಲ್ವೆಯ ಬಳಕೆದಾರರ ಸಮಾಲೋಚನಾ ಸಮಿತಿ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಈ ಸಭೆಯ ಅಧ್ಯಕ್ಷತೆಯನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಹಿಸಿದ್ದರು. ಸಭೆಯಲ್ಲಿ ಕೇರಳ, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಪ್ರಮುಖ ರೈಲ್ವೆ ಸಂಬಂಧಿತ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಗಹನವಾದ ಚರ್ಚೆ ನಡೆಯಿತು.

ಸಭೆಯಲ್ಲಿ ಕೈಗೊಂಡ ನಿರ್ಣಯಗಳು

  • SMVB ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲು ವಿಸ್ತರಣೆ: ರೈಲು ಸಂಖ್ಯೆ 16585/86 (SMVB ಮುರುಡೇಶ್ವರ ಎಕ್ಸ್‌ಪ್ರೆಸ್) ಅನ್ನು ಗೋವಾದ ವಾಸ್ಕೋವರೆಗೂ ವಿಸ್ತರಿಸಲು ರೈಲ್ವೆ ಮಂಡಳಿಗೆ ಮರು ಪ್ರಸ್ತಾವನೆಯನ್ನು ಸಲ್ಲಿಸಲು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ.
  • ಕಾರವಾರ – ಮಡಗಾಂವ್ ಮೆಮು ರೈಲನ್ನು ಗೋವಾದ ಪೆರ್ನಂವರೆಗೆ ವಿಸ್ತರಿಸುವ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. ಈ ವಿಸ್ತರಣೆ ಶೀಘ್ರದಲ್ಲೇ ಜಾರಿಗೆ ಬರಲಿದೆ.
  • ಪಂಚಗಂಗಾ ಎಕ್ಸ್‌ಪ್ರೆಸ್ (ಕಾರವಾರ – ಬೆಂಗಳೂರು, ರೈಲು ಸಂಖ್ಯೆ 16595/96) ಗೆ ಈಗಿರುವ 19 ಬೋಗಿಗಳ ಜೊತೆಗೆ ಇನ್ನೂ 3 ಹೆಚ್ಚುವರಿ ಬೋಗಿಗಳನ್ನು ಸೇರಿಸಲು ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ಸೂಚಿಸಲಾಗಿದೆ. ಈ ನಿರ್ಧಾರದಿಂದ ಈ ಪ್ರಮುಖ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳಕ್ಕೆ ಅನುಗುಣವಾಗಿ ಸಾಮರ್ಥ್ಯ ವೃದ್ಧಿಯಾಗಲಿದೆ.
  • ಕೊಂಕಣ ರೈಲ್ವೆಗೆ ಸಂಬಂಧಿಸಿದ ಮಾಹಿತಿಯನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುವ ಹೊಸ ಮೊಬೈಲ್ ಅಪ್ಲಿಕೇಶನ್ ‘ಕೆ.ಆರ್. ಮಿರರ್’ ಅನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬಿಡುಗಡೆ ಮಾಡಿದರು. ಈ ಆ್ಯಪ್ ಮೂಲಕ ಪ್ರಯಾಣಿಕರು ರೈಲುಗಳ ಸ್ಥಿತಿ, ವೇಳಾಪಟ್ಟಿ ಮತ್ತು ಇತರ ಸೇವೆಗಳ ಕುರಿತು ಮಾಹಿತಿ ಪಡೆಯಬಹುದು.

NO COMMENTS

LEAVE A REPLY

Please enter your comment!
Please enter your name here

Exit mobile version