ಮಂಕಿ ಪಟ್ಟಣ ಪಂಚಾಯತ್ ಬಿಜೆಪಿ ಪಾಲು

0
5

ಹೊನ್ನಾವರ: ಮಂಕಿ ಪಟ್ಟಣ ಪಂಚಾಯತ್ ಆಡಳಿತ ಇದೀಗ ಬಿಜೆಪಿ ಪಾಲಾಗಿದೆ. ಪಟ್ಟಣ ಪಂಚಾಯತ್ ಆಗಿ ಘೋಷಣೆಯಾದ ನಾಲ್ಕು ವರ್ಷಗಳ ನಂತರ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ರಾಜಕೀಯವಾಗಿ ಈ ಫಲಿತಾಂಶ ಮಹತ್ವ ಪಡೆದುಕೊಂಡಿದೆ.

ಈ ಚುನಾವಣೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಮಾಜಿ ಸಚಿವ ಶಿವಾನಂದ ನಾಯ್ಕ ಅವರ ನಡುವಿನ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿತ್ತು. ಸಚಿವರ ತವರು ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಈ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಮೇಲುಗೈ ಸಾಧಿಸುವ ಮೂಲಕ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆ ಉಂಟಾಗಿದೆ. ಫಲಿತಾಂಶದ ಮೂಲಕ ಶಿವಾನಂದ ನಾಯ್ಕ ಅವರ ನೇತೃತ್ವದ ಬಿಜೆಪಿ ತನ್ನ ಸಂಘಟನಾ ಶಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ.

ಇದನ್ನೂ ಓದಿ: ರಬಕವಿ-ಬನಹಟ್ಡಿ ಪ್ರಾಧಿಕಾರ ಅಧ್ಯಕ್ಷ ದಿಢೀರ್ ಬದಲಾವಣೆ ಹುಲಜತ್ತಿ ಬದಲು ಸುರೇಶ ಪಾಟೀಲ ನೇಮಕ

ಚುನಾವಣೆಯಲ್ಲಿ ಒಟ್ಟು 20 ಸ್ಥಾನಗಳಿಗೆ ನಡೆದ ಮತದಾನದಲ್ಲಿ ಬಿಜೆಪಿ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ ಜಯಗಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಗಳು 8 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದ್ದಾರೆ. ಈ ಫಲಿತಾಂಶದಿಂದ ಪಟ್ಟಣ ಪಂಚಾಯತ್‌ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ.

ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಹೊನ್ನಾವರದ ಶರಾವತಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದರು. ಬಿಜೆಪಿ ಧ್ವಜಗಳನ್ನು ಹಾರಿಸಿ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಲಾಯಿತು. “ಜನರು ಅಭಿವೃದ್ಧಿಗೆ ಮತ ನೀಡಿದ್ದಾರೆ” ಎಂದು ಬಿಜೆಪಿ ಮುಖಂಡರು ಸಂತಸ ವ್ಯಕ್ತಪಡಿಸಿದರು.

Previous articleರಬಕವಿ-ಬನಹಟ್ಡಿ ಪ್ರಾಧಿಕಾರ ಅಧ್ಯಕ್ಷ ದಿಢೀರ್ ಬದಲಾವಣೆ ಹುಲಜತ್ತಿ ಬದಲು ಸುರೇಶ ಪಾಟೀಲ ನೇಮಕ