ಸಂಸದ ಬೊಮ್ಮಾಯಿ ಆಗ್ರಹ: ಮೆಕ್ಕೆಜೋಳ ಖರೀದಿ ಆರಂಭಿಸಿ, ಹೆಚ್ಚುವರಿ ಬೆಂಬಲ ಬೆಲೆ ನೀಡಿ

2
74

ರಾಜ್ಯದಲ್ಲಿ ಮೆಕ್ಕೆಜೋಳ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟದ ಕುರಿತು ಸರ್ಕಾರ ಗಮನ ಹರಿಸಬೇಕು ಎಂದು ಆಗ್ರಹಿಸಿರುವ ಸಂಸದ ಬಸವರಾಜ ಬೊಮ್ಮಾಯಿ, ರೈತರ ಹಿತರಕ್ಷಣೆಗಾಗಿ ಪ್ರತಿಯೊಂದು ತಾಲ್ಲೂಕಿನಲ್ಲಿಯೂ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತಕ್ಷಣವೇ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.

ಶನಿವಾರ ವರದಿಗಾರೂಂದು ಮಾತನಾಡಿ, ರಾಜ್ಯ ಸರ್ಕಾರವು ಮೆಕ್ಕೆಜೋಳವನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವುದಾಗಿ ಘೋಷಿಸಿದೆ. ಆದರೆ ಪ್ರಸ್ತುತ ನಿಗದಿಪಡಿಸಿದ ಬೆಂಬಲ ಬೆಲೆಯ ಮೊತ್ತವು ಕಡಿಮೆಯಾಗಿರುವುದರಿಂದ ರೈತರು ಹೆಚ್ಚುವರಿ ದರಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಹೆಚ್ಚುವರಿ ಬೆಂಬಲ ಬೆಲೆ ನೀಡಿ ರೈತರ ಸಂಪೂರ್ಣ ಉತ್ಪನ್ನವನ್ನು ಖರೀದಿಸಬೇಕು ಎಂದು ಬೊಮ್ಮಾಯಿ ಆಗ್ರಹಿಸಿದರು.

ಬೆಳೆ ನಷ್ಟ ಮತ್ತು ಸರ್ಕಾರದ ನಿರ್ಲಕ್ಷ್ಯ: ರಾಜ್ಯದಲ್ಲಿ ಮೆಕ್ಕೆಜೋಳ ಬೆಳೆಯ ಪ್ರಮಾಣದ ಕುರಿತು ಮಾಹಿತಿ ನೀಡಿದ ಸಂಸದರು, “ಕಳೆದ ವರ್ಷ 15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಟನ್ ಮೆಕ್ಕೆಜೋಳ ಬೆಳೆಯಲಾಗಿತ್ತು.

ಈ ವರ್ಷ 17 ಲಕ್ಷ ಹೆಕ್ಟೇ‌ರ್ ಪ್ರದೇಶದಲ್ಲಿ ಬಿತ್ತನೆ ನಡೆದಿದ್ದರೂ, ಉತ್ಪಾದನೆಯು 54 ಲಕ್ಷ ಮೆಟ್ರಿಕ್ ಟನ್‌ಗೆ ಸ್ಥಗಿತಗೊಂಡಿದೆ. ಇದರಿಂದ 2 ಲಕ್ಷ ಮೆಟ್ರಿಕ್ ಟನ್ ನಷ್ಟ ಉಂಟಾಗಿದೆ,” ಎಂದು ತಿಳಿಸಿದರು. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ.

ಮೆಕ್ಕೆಜೋಳದ ಬೆಲೆ ಕುಸಿತದಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಹತ್ವದ ಸಂದರ್ಭದಲ್ಲಿ ಸರ್ಕಾರವು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು. ಆದರೆ ಸರ್ಕಾರಕ್ಕೆ ರೈತಪರ ಚಿಂತನೆಗಳಿಲ್ಲ ಎಂದು ಬೊಮ್ಮಾಯಿ ತೀವ್ರ ಟೀಕೆ ಮಾಡಿದರು.

ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಪ್ರತಿ ತಾಲ್ಲೂಕಿನಲ್ಲಿ ಆರಂಭಿಸುವುದು, ಅಲ್ಲದೆ ಕೇಂದ್ರ ಸರ್ಕಾರದ ಜೊತೆಗೂ ಸಮನ್ವಯ ಸಾಧಿಸಿ ರೈತರಿಗೆ ನ್ಯಾಯಯುತ ಬೆಲೆ ಸಿಗುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Previous articleಮದುವೆ ಕುರಿತು ಮೌನ ಮುರಿದ ಸ್ಮೃತಿ ಮಂದಾನ
Next articleನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಮನವಿ ಮಾಡಿದ ಪಾಕ್‌ ಮಹಿಳೆ

2 COMMENTS

  1. Как магазиН? https://rentonminuto.com Какие пробы братишка, ты о чем вообще? Покупай и пробуйно чет с каждым разом доставка все дороже и дороже(((

  2. Либо вы прекращаете оффтопить в ветке магазина (к оффтопу относятся: сообщения НЕ по теме, личная переписка и т.п.) либо я буду банить. купить Кокаин, Мефедрон, Экстази С Ув. vkapushoneПолучил сегодня посылку, могу уже с уверенностью сказать, Замечательного магазина.Клад сделан очень грамотно в безлюдном месте, к кладу прилагалось фото на котором указано место закладки.

LEAVE A REPLY

Please enter your comment!
Please enter your name here