Home ನಮ್ಮ ಜಿಲ್ಲೆ ಉತ್ತರ ಕನ್ನಡ ಕಾರವಾರ: ಸೂಪರ್ ಸ್ಟೇಷಾಲಿಟಿ ಆಸ್ಪತ್ರೆ ಮಂಜೂರು ಮಾಡದಿದ್ದರೆ ರಾಜಕೀಯ ನಿವೃತ್ತಿ – ಶಾಸಕ ಸತೀಶ ಸೈಲ್

ಕಾರವಾರ: ಸೂಪರ್ ಸ್ಟೇಷಾಲಿಟಿ ಆಸ್ಪತ್ರೆ ಮಂಜೂರು ಮಾಡದಿದ್ದರೆ ರಾಜಕೀಯ ನಿವೃತ್ತಿ – ಶಾಸಕ ಸತೀಶ ಸೈಲ್

0

ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಸ್ಥಾಪನೆಯಾಗಬೇಕು ಎನ್ನುವದು ಜಿಲ್ಲೆಯ ಜನರ ಬಹುದಿನದ ಬೇಡಿಕೆ. ಇದಕ್ಕೆ ಬೇಕಾದ ಸೂಕ್ತ ವಾತಾವರಣ ಕಾರವಾರದಲ್ಲಿದೆ.

ಈಗಾಗಲೇ ವೈದ್ಯಕೀಯ ಕಾಲೇಜು ಇದೆ. ಇಲ್ಲಿಯೇ ಸೂಪರ್ ಸ್ಟೇಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಎಲ್ಲ ರೀತಿಯ ಅನುಕೂಲವಿದೆ. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಮುಂದಿನ ಬಜೆಟ್ ನಲ್ಲಿ ಸೂಪರ್ ಸ್ಟೇಷಾಲಿಟಿ ಆಸ್ಪತ್ರೆ ಮಂಜೂರು ಮಾಡಿಸದಿದ್ದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯದಿಂದ ನಿವೃತ್ತಿ ಪಡೆಯುವುದು ನಿಶ್ಚಿತವೆಂದು ಕಾರವಾರ ಶಾಸಕ ಸತೀಶ ಸೈಲ್ ಹೇಳಿದ್ದಾರೆ.

ಅವರು ಇಂದು ಕಾರವಾರದಲ್ಲಿ ಈ ವಿಷಯ ಪ್ರಸ್ತಾಪಿಸಿ, ಜಿಲ್ಲೆಯ ಜನರ ಬಹು ಮುಖ್ಯ ಬೇಡಿಕೆಯಾದ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹತ್ತಿರ ಪ್ರಸ್ಥಾಪಿಸಿದ್ದೇನೆ. ಅವರು ಈ ವಿಷಯದ ಕುರಿತು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿ ಬರುವ ನವಂಬರನಲ್ಲಿ ಭೇಟಿಯಾಗುವಂತೆ ತಿಳಿಸಿದ್ದಾರೆ.

ಮುಂದಿನ ವರ್ಷದ ಮಾರ್ಚ ಬಜೆಟ್ ನಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ಹಣ ಮಂಜೂರು ಮಾಡುವ ಭರವಸೆ ಇದೆ. ಮುಂದಿನ ಬಜೆಟ್ ನಲ್ಲಿ ಮಂಜೂರಾಗದಿದ್ದರೆ ನಾನು ರಾಜಿನಾಮೆ ನೀಡಿ ರಾಜಕೀಯದಿಂದ ನಿವೃತ್ತನಾಗುವದು ಶತಸಿದ್ಧವೆಂದು ನುಡಿದಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version