ಕಾರವಾರ: ತಾಲೂಕಿನ ಮಂಕಿ ಮಂಡಿ ಬೀಚ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಅಪ್ರಾಪ್ತ ಸಹೋದರರು ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಕರುಣಾಜನಕ ಘಟನೆ ಶುಕ್ರವಾರ ನಡೆದಿದೆ.
ಮೃತಪಟ್ಟವರನ್ನು ಮದನ ನಾರಾಯಣ ಖಾರ್ವಿ (17) ಮತ್ತು ಸುಜನ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ. ಇವರಿಬ್ಬರು ಹೊನ್ನಾವರ ತಾಲೂಕಿನ ನಿವಾಸಿಗಳಾಗಿದ್ದಾರೆ.
ಶುಕ್ರವಾರ ಈ ಇಬ್ಬರು ಸಹೋದರರು ಮೀನು ಹಿಡಿಯಲೆಂದು ಪಾತಿ ದೋಣಿಯಲ್ಲಿ ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರವಾಗಿದ್ದು, ನಿಯಂತ್ರಣ ತಪ್ಪಿದ ದೋಣಿ ಮಗುಚಿದೆ. ದೋಣಿ ಮುಳುಗಿದ ಪರಿಣಾಮ ಇಬ್ಬರೂ ಸಮುದ್ರದ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಮೀನುಗಾರರ ಕುಟುಂಬದಲ್ಲಿ ಮತ್ತು ಸ್ಥಳೀಯ ಮಂಕಿ ಗ್ರಾಮದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.























