SK Home Ad
Home ನಮ್ಮ ಜಿಲ್ಲೆ ಉತ್ತರ ಕನ್ನಡ ಯುವ ಪ್ರತಿಭೆ ಸುಜಾತಾಗೆ ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಆಹ್ವಾನ

ಯುವ ಪ್ರತಿಭೆ ಸುಜಾತಾಗೆ ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಆಹ್ವಾನ

0
16

ಶಿರಸಿ: ತಾಲೂಕಿನ ದೊಡ್ಡನಳ್ಳಿ ಗ್ರಾಮದವರಾದ ಶಿರಸಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮಾಜಿ ರೇಂಜರ್ ಹಾಗೂ ಪ್ರಸ್ತುತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಯುವ ಸಮಿತಿಯ ಉಪಾಧ್ಯಕ್ಷರಾದ ಸುಜಾತಾ ಸುರೇಶ್ ನಾಯ್ಕ್ ಅವರು ಆಗಸ್ಟ್ 15ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಗೌರವಾನ್ವಿತ ರಾಷ್ಟ್ರಪತಿಯವರ `ಎಟ್ ಹೋಂ ರಿಸೆಪ್ಷನ್’ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ.

ಸುಜಾತಾ ಸುರೇಶ್ ನಾಯಕ್ ಅವರಿಗೆ ರಾಷ್ಟ್ರಪತಿಗಳ ಆಹ್ವಾನ ಪತ್ರವನ್ನು ಕರ್ನಾಟಕ ಅಂಚೆ ವಲಯವು ತಲುಪಿಸಿದೆ. ಶಿರಸಿ ಶೈಕ್ಷಣಿಕ ಜಿಲ್ಲೆಯ ರೇಂಜರ್ ಆಗಿ (2023-24) ಪದವಿ ಪೂರ್ಣಗೊಳಿಸಿರುವ ಸುಜಾತಾ ಅವರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ (ಎಸ್‌ಡಿಎಂಎ) ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ `ಯುವ ಆಪದ್ ಮಿತ್ರ’ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ನಿರಂತರವಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಈ ಆಪದ್ಮಿತ್ರ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಈ ಉನ್ನತ ಗೌರವಕ್ಕೆ ಆಯ್ಕೆ ಮಾಡಲಾಗಿದೆ.