SK Home Ad
Home ನಮ್ಮ ಜಿಲ್ಲೆ ಉತ್ತರ ಕನ್ನಡ ಆತ್ಮಲಿಂಗ ದರ್ಶನಕ್ಕೆ ಬಂದ ಗೋವಾ ಯಾತ್ರಿಕ ಹೃದಯಾಘಾತದಿಂದ ಸಾವು

ಆತ್ಮಲಿಂಗ ದರ್ಶನಕ್ಕೆ ಬಂದ ಗೋವಾ ಯಾತ್ರಿಕ ಹೃದಯಾಘಾತದಿಂದ ಸಾವು

0
1160

ಗೋಕರ್ಣ: ಶಿವರಾತ್ರಿಯಂದು ಮಹಾಬಲೇಶ್ವರ ದೇವರ ದರ್ಶನಕ್ಕೆ ಬಂದ ಭಕ್ತರೊಬ್ಬರು ದರ್ಶನ ಪಡೆದು ಹೊರ ಬಂದ ಬಳಿಕ ಹೃದಯಾಘಾತವಾಗಿ ಮೃತಪಟ್ಟ ಘಟನೆ ರವಿವಾರ ನಡೆದಿದೆ.

ಗೋವಾ ಮೂಲದ ರತ್ನಾಕರ ಬೋಮಕರ (71) ಮೃತಪಟ್ಟ ವೃದ್ಧ. ಇವರು ಒಬ್ಬರೇ ಮಹಾಬಲೇಶ್ವರ ಮಂದಿರಕ್ಕೆ ಭೇಟಿ ನೀಡಿ ಆತ್ಮಲಿಂಗದ ದರ್ಶನ ಪಡೆಯಲು ಬಂದಿದ್ದರು. ದೇವರ ದರ್ಶನ ಪಡೆದು ಹೊರ ಬಂದ ಬಳಿಕ ಕುಸಿದು ಬಿದ್ದರು. ತಕ್ಷಣ ಪೊಲೀಸ್ ವಾಹನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ. ಆದರೆ ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಇನ್ನೊಂದು ಘಟನೆಯಲ್ಲಿ ಇಲ್ಲಿಗೆ ಬಂದಿದ್ದ ಯಾತ್ರಿಕರೊಬ್ಬರು ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದು, ಪ್ರಭಾರಿ ಆಡಳಿತ ವೈದ್ಯಾಧಿಕಾರಿ ಡಾ. ಜಗದೀಶ ನಾಯ್ಕ ಹಾಗೂ ಸಿಬ್ಬಂದಿ ಸೂಕ್ತ ಚಿಕಿತ್ಸೆ ನೀಡಿ ಜೀವಾಪಾಯದಿಂದ ಪಾರು ಮಾಡಿದ್ದಾರೆ.