ದೇಶದಲ್ಲಿ ನೆಲೆ ಕಳೆದುಕೊಂಡ ಕಾಂಗ್ರೆಸ್‌, ರಾಜ್ಯದಲ್ಲಿ ಅಡ್ರೆಸ್ ಹುಡುಕುತ್ತಿದೆ

0
118
BSY

ಹೂವಿನಹಡಗಲಿ: ದೇಶದಲ್ಲಿ ಅಸ್ತಿತ್ವ ಕಳೆದುಕೊಂಡಿರುವ ಕಾಂಗ್ರೆಸ್ ರಾಜ್ಯದಲ್ಲಿ ಪಾದಯಾತ್ರೆಯ ಮೂಲಕ ವಿಳಾಸ ಹುಡುಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದರು.
ಹೂವಿನಹಡಗಲಿ ತಾಲೂಕು ಕ್ರೀಡಾಂಗಣದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಜನ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಈಗಾಗಲೇ ದೇಶದಲ್ಲಿ ಎಲ್ಲಾ ರಾಜ್ಯಗಳನ್ನು ಕಳೆದುಕೊಂಡಿರುವ ಕಾಂಗ್ರೆಸ್ ಈಗ ರಾಜ್ಯಕ್ಕೆ ಆಗಮಿಸಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ. ಇದಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು

Previous articleಕಾಂಗ್ರೆಸ್‌ಗೆ ಯಾತ್ರೆ ಶಬ್ದ ಕಲಿಸಿದ್ದೇ ಬಿಜೆಪಿ
Next articleಕಾಂಗ್ರೆಸ್‌ದು 85% ಕಮೀಷನ್ ಸರ್ಕಾರ