Home ನಮ್ಮ ಜಿಲ್ಲೆ ವಿಜಯನಗರ ಹಂಪಿಯಲ್ಲಿ ಬೆಂಕಿ ಅವಘಡ: ಸುಟ್ಟು ಭಸ್ಮವಾದ ಹೋಟೆಲ್

ಹಂಪಿಯಲ್ಲಿ ಬೆಂಕಿ ಅವಘಡ: ಸುಟ್ಟು ಭಸ್ಮವಾದ ಹೋಟೆಲ್

0
142
HAMPI

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯ ಹೋಟೆಲ್‌ವೊಂದರಲ್ಲಿ ಅಡುಗೆ ಅನಿಲ ಸ್ಪೋಟಗೊಂಡ ಪರಿಣಾಮ ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಗುರುವಾರ ರಾತ್ರಿ ಜರುಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಹಂಪಿಯ ಜನತಾ ಪ್ಲಾಟ್‌ನಲ್ಲಿರುವ ಮ್ಯಾಂಗೋ ಟ್ರೀ ಹೋಟೆಲ್‌ನಲ್ಲಿ ಸಿಲೆಂಡರ್ ಸ್ಫೋಟಗೊಂಡು ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ದೌಡಾಯಿಸಿ ಬಂದ ಅಗ್ನಿಶಾಮಕ ಸಿಬ್ಬಂದಿ ಹೋಟೆಲ್‌ನಲ್ಲಿದ್ದ ಕೆಲ ಸಿಲಿಂಡರ್‌ಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರಿಸಿ, ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ. ಅಷ್ಟೋತ್ತಿಗಾಗಲೇ ಅಡುಗೆ, ಸಾಮಾನು, ಇತರೆ ಪರಿಕರಗಳು ಸೇರಿದಂತೆ ಹೋಟೆಲ್ ಸಂಪೂರ್ಣ ಸುಟ್ಟು ಭಸ್ಮವಾಗಿ ಅವಶೇಷಗಳು ಮಾತ್ರ ಗೋಚರಿಸಿದವು.
ಮೊದಲಿಗೆ ಹೋಟೆಲ್ ಪಕ್ಕದಲ್ಲಿರುವ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಮ್ಯಾಂಗೋ ಟ್ರೀ ಹೋಟೆಲ್, ಅನ್ನಪೂರ್ಣೇಶ್ವರಿ ಛತ್ರಕ್ಕೆ ಬೆಂಕಿ ತಗುಲಿದೆ. ಹೋಟೆಲ್‌ನಲ್ಲಿ ಸಿಲಿಂಡರ್ ಸ್ಫೋಟಗೊಳ್ಳುತ್ತಿಂದತೇ, ಜನತಾ ಪ್ಲಾಟ್‌ನ ಹೋಟೆಲ್‌ಗಳಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಪ್ರವಾಸಿಗರು ಆತಂಕದಲ್ಲಿ ದಿಕ್ಕೆಟ್ಟು ಓಡಿ ಹೋಗಿ, ತುಂಗಭದ್ರಾ ನದಿ ತೀರದಲ್ಲಿ ಆಶ್ರಯ ಪಡೆದಿದ್ದಾರೆ.