SK Home Ad
Home ನಮ್ಮ ಜಿಲ್ಲೆ ವಿಜಯನಗರ ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ ಮೂರೂವರೆ ಟಿಎಂಸಿ ನೀರು!

ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ ಮೂರೂವರೆ ಟಿಎಂಸಿ ನೀರು!

0
30

ಹೊಸಪೇಟೆ: ವಿಜಯನಗರ, ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯದ ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಒಂದೇ ದಿನದಲ್ಲಿ ಮೂರೂವರೆ ಟಿಎಂಸಿ ನೀರು ಹರಿದು ಬಂದಿದೆ.

ಜಲಾಶಯಕ್ಕೆ 44,782 ಕ್ಯೂಸೆಕ್ ನೀರು ಹರಿದುಬಂದಿದೆ. ಜಲಾಶಯದ ಕಾಲುವೆಗಳ ಮೂಲಕ ಮಾತ್ರ 180 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ ಎರಡು ಮೂರು ದಿನಗಳಿಂದ ಜಲಾಶಯದ ಒಳ ಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು ಒಳ ಹರಿವಿನ ಪ್ರಮಾಣ ಇನ್ನೂ ಹೆಚ್ಚಳವಾಗಲಿದೆ ಎಂದು ತುಂಗಭದ್ರಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನುಳಿದಂತೆ ನಾಲ್ಕೈದು ದಿನಗಳಿಂದ ವ್ಯಾಪಕ ಮಳೆಯಾಗಿ ಅನಾಹುತ ಉಂಟು ಮಾಡಿದ್ದ ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಒಂದಿನಿತೂ ಮಳೆಯಾಗಿಲ್ಲ.