Home Advertisement
Home ನಮ್ಮ ಜಿಲ್ಲೆ ವಿಜಯನಗರ ಹಂಪಿ ವಿವಿ ಹೆಲಿಪ್ಯಾಡ್‌ನಿಂದ ಹಾವೇರಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ

ಹಂಪಿ ವಿವಿ ಹೆಲಿಪ್ಯಾಡ್‌ನಿಂದ ಹಾವೇರಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ

0
54

ಹಂಪಿಯಿಂದ ಹಾವೇರಿಗೆ ಹಾರಿದ ಸಿಎಂ

ವಿಜಯನಗರ / ಹಂಪಿ: ಹಂಪಿ ಉತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಂಪಿಯ ಕನ್ನಡ ವಿಶ್ವವಿದ್ಯಾಲಯ ಹಂಪಿ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಹಾವೇರಿಗೆ ತೆರಳಿದರು. ಹಾವೇರಿಯಲ್ಲಿ ನಡೆಯಲಿರುವ ಸರ್ಕಾರದ ಸಮಾವೇಶದಲ್ಲಿ ಭಾಗವಹಿಸುವ ಉದ್ದೇಶದಿಂದ ಸಿಎಂ ಅವರು ಈ ಪ್ರಯಾಣ ಕೈಗೊಂಡರು.

ನಾಯಕರ ಸಾಥ್: ಈ ವೇಳೆ ಸಿಎಂ ಅವರೊಂದಿಗೆ ಶಾಸಕರಾದ ನಾಗೇಂದ್ರ, ಭರತ್ ರೆಡ್ಡಿ, ಸಚಿವರಾದ ಎಚ್ ಕೆ ಪಾಟೀಲ್, ಸಂಸದ ಈ ತುಕಾರಾಂ, ಸಚಿವ ಬೈರತಿ ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಹೆಲಿಕಾಪ್ಟರ್‌ಗೆ ಏರುವ ಮುನ್ನ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಸಿಎಂ, ಜನರ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸಿದರು.

ಇದನ್ನೂ ಓದಿ: ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ

ಸಾವಿರ ದಿನಗಳ ಸಾಧನೆ ಕುರಿತು ಸಿಎಂ ಮಾತು: ಹಂಪಿ ಹೆಲಿಪ್ಯಾಡ್‌ನಲದಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಇಂದು ನಮ್ಮ ಸರ್ಕಾರಕ್ಕೆ ಸಾವಿರ ಒಂದನೇ ದಿನ. ನಾವು ನುಡಿದಂತೆ ನಡೆದುಕೊಂಡಿದ್ದೇವೆ. ಬಜೆಟ್ ಬಗ್ಗೆ ಇಲ್ಲೇ ಮಾತಾಡುವುದಿಲ್ಲ. ಹಾವೇರಿಯಲ್ಲಿ ಭಾಷಣ ಮಾಡುತ್ತೇನೆ,” ಎಂದು ತಿಳಿಸಿ ಹಾವೇರಿಗೆ ತೆರಳಿದರು.

ಗ್ಯಾರಂಟಿ ಯೋಜನೆಗಳ ಸಾಧನೆ: ಸರ್ಕಾರದ ಸಾವಿರ ದಿನಗಳ ಸಾಧನೆ ಕುರಿತು ಸಿಎಂ ಅವರು ವಿವರಿಸಿ, ಗ್ಯಾರಂಟಿ ಯೋಜನೆಗಳ ಮೂಲಕ ರೂ.1.13 ಲಕ್ಷ ಕೋಟಿ ಹಣವನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ರೂ.1 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತವನ್ನು ಮೀಸಲಿಡಲಾಗಿದೆ. ರಾಜ್ಯದ 1.37 ಕೋಟಿ ಕುಟುಂಬಗಳು ನೇರವಾಗಿ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ತಾಲೂಕು ಕಚೇರಿ ಹಳೆಯ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ

ಕಲ್ಯಾಣ ಕಾರ್ಯಕ್ರಮಗಳಿಂದ ರಾಜ್ಯದ ತಲಾ ಆದಾಯ ದೇಶದಲ್ಲೇ ಉನ್ನತ ಮಟ್ಟಕ್ಕೇರಿದೆ. ರಾಜ್ಯದಲ್ಲಿ ಶಾಂತಿ-ನೆಮ್ಮದಿ ವಾತಾವರಣ ನಿರ್ಮಾಣವಾಗಿ ವಿದೇಶಿ ಬಂಡವಾಳ ಹೂಡಿಕೆ ಹೆಚ್ಚಾಗಿದೆ. ಎಂದು ಹೇಳಿದರು.

ಶಾಂತಿ ಮತ್ತು ಅಭಿವೃದ್ಧಿಯ ದಿಕ್ಕಿನಲ್ಲಿ ಕರ್ನಾಟಕ: “ಸರ್ವಜನಾಂಗದ ಶಾಂತಿಯ ತೋಟವಾಗಿರುವ ಕರ್ನಾಟಕವನ್ನು ನಿರ್ಮಿಸುವ ಸಂಕಲ್ಪದೊಂದಿಗೆ ನಾವು ಆಡಳಿತ ನಡೆಸುತ್ತಿದ್ದೇವೆ. ಈ ಸಾಧನೆಗೆ ಕಾರಣರಾದ ರಾಜ್ಯದ ಪ್ರತಿಯೊಬ್ಬ ನಾಗರಿಕರಿಗೆ ಧನ್ಯವಾದಗಳು,” ಎಂದು ಸಿಎಂ ಹೇಳಿದರು. ಸಾವಿರ ದಿನಗಳ ಪಯಣವನ್ನು ಯಶಸ್ವಿಯಾಗಿ ಪೂರೈಸಿದ ಸರ್ಕಾರಕ್ಕೆ ಮುಂದೆಯೂ ಜನರ ಆಶೀರ್ವಾದ ಮತ್ತು ಸಹಕಾರ ಇರಲಿ ಎಂದು ಅವರು ಮನವಿ ಮಾಡಿದರು.

Previous articleಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ
Next articleಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐತಿಹಾಸಿಕ ನಾಮಕರಣ