SK Home Ad
Home ನಮ್ಮ ಜಿಲ್ಲೆ ವಿಜಯನಗರ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿಸಿದ್ದೇ ಡಿಕೆಶಿ

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿಸಿದ್ದೇ ಡಿಕೆಶಿ

0
25

ಹೊಸಪೇಟೆ: ಸಿಡಿ ಹಾಗೂ ಸ್ಟಿಂಗ್ ಆಪರೇಷನ್ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಉದ್ದೇಶದಿಂದಲೇ ಸ್ಟಿಂಗ್ ಆಪರೇಷನ್ ಮಾಡಲಾಗಿದೆ. ಡಿ.ಕೆ. ಶಿವಕುಮಾರ್ ಸ್ಟಿಂಗ್ ಆಪರೇಷನ್‌ನ ಪಿತಾಮಹ. ಸಿದ್ದರಾಮಯ್ಯ ಅವರ ವೈಯಕ್ತಿಕ ಜೀವನದ ವಿಚಾರಗಳನ್ನು ಮುಂದಿಟ್ಟುಕೊಂಡು ಅವರ ಹೆಸರಿಗೆ ಧಕ್ಕೆ ತರುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದರು.

ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಇಲ್ಲದಿದ್ದರೆ ಸಿಐಡಿ ಅಥವಾ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಕಬ್ಬು ಬೆಳೆಗಾರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ರೈತರಿಗೆ ನ್ಯಾಯಯುತ ಬೆಲೆ ನೀಡುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು, ಕೇಂದ್ರ ಸರ್ಕಾರ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕು. ರಾಜ್ಯ ಸರ್ಕಾರವೂ ರೈತರಿಗೆ ನ್ಯಾಯ ಒದಗಿಸಲು ಮುಂದಾಗಬೇಕು. ರಾಜ್ಯದ ಖಜಾನೆಯಿಂದಲೂ ರೈತರಿಗೆ ನೆರವು ನೀಡಬೇಕು ಎಂದು ಆಗ್ರಹಿಸಿದರು.