ಹೊಸಪೇಟೆ: ನಗರದ ಹೊರವಲಯದ ಅರಣ್ಯ ಪ್ರದೇಶದ ಗುಡ್ಡಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಇದರಿಂದ ಅಪಾರ ಹಾನಿಯಾಗುವ ಆತಂಕ ಎದುರಾಗಿದೆ.
ಸೋಮವಾರ ಸಂಜೆ 6.30ರ ಸುಮಾರಿಗೆ ಬೆಂಕಿ ಬಿದಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಅರ್ಧ ಗಂಟೆಯಲ್ಲಿಯೇ ಹೊತ್ತಿ ಉರಿದಿದೆ. ಅರಣ್ಯ ಪ್ರದೇಶದ ಭಾಗದಲ್ಲಿ ಹೈ ಟೆನ್ಷನ್ ಲೈನ್, ಕಂಬಗಳಿರೋ ಜಾಗ, ವಿಂಡ್ ಫ್ಯಾನ್ ಕೂಡ ಇರೋ ಜಾಗದಲ್ಲಿ ಬೆಂಕಿ ಹೊತ್ತಿ ಉರಿದಿದೆ.









