SK Home Ad
Home ನಮ್ಮ ಜಿಲ್ಲೆ ವಿಜಯನಗರ ವಿಜಯನಗರದಲ್ಲಿ ದೇಶದ ಮಾದರಿ ರಂಗಮಂದಿರಕ್ಕೆ ಶಂಕುಸ್ಥಾಪನೆ

ವಿಜಯನಗರದಲ್ಲಿ ದೇಶದ ಮಾದರಿ ರಂಗಮಂದಿರಕ್ಕೆ ಶಂಕುಸ್ಥಾಪನೆ

0
74

ವಿಜಯನಗರ: ದೇಶದಲ್ಲೇ ಮಾದರಿಯಾಗುವ ನೂತನ ರಂಗಮಂದಿರ ನಿರ್ಮಾಣಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.

ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದಲ್ಲಿ ನಿರ್ಮಾಣವಾಗಲಿರುವ ಅತ್ಯಾಧುನಿಕ ರಂಗಮಂದಿರ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಸಚಿವೆ, ಈ ಯೋಜನೆ ಜಿಲ್ಲೆಯ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೊಸ ಉತ್ತೇಜನ ನೀಡಲಿದೆ ಎಂದು ಹೇಳಿದರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿರ್ಮಲಾ ಸೀತಾರಾಮನ್ ಅವರು ಗಿಡಗಳಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಅಭಿವೃದ್ಧಿಯ ಜೊತೆಗೆ ಪರಿಸರ ಕಾಳಜಿಯೂ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ನೂತನ ರಂಗಮಂದಿರ ನಿರ್ಮಾಣದಿಂದ ವಿಜಯನಗರ ಜಿಲ್ಲೆಯ ಸಾಂಸ್ಕೃತಿಕ, ಸಾಹಿತ್ಯ ಹಾಗೂ ಕಲಾ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.