IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶವನ್ನು ಹೊರಡಿಸಿದೆ. ಅವಳಿ ಜಿಲ್ಲೆಗಳಾದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾಧಿಕಾರಿಗಳು ಬದಲಾಗಿದ್ದಾರೆ. ಕರ್ನಾಟಕ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶಿಸಿದೆ. ವಿಜಯನಗರ ಮತ್ತು ಬಳ್ಳಾರಿಗೆ ನೂತನ ಜಿಲ್ಲಾಧಿಕಾರಿಗಳ ನೇಮಕವಾಗಿದೆ.
ವಿಜಯನಗರ ಡಿಸಿ: ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ವರ್ಗಾವಣೆ ಮಾಡಿದೆ. ಕವಿತಾ ಎಸ್. ಮನ್ನಿಕೇರಿ (ಕೆಎನ್:2012) ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಕವಿತಾ ಎಸ್. ಮನ್ನಿಕೇರಿ ಸ್ಥಳ ನಿಯೋಜನೆ ನಿರೀಕ್ಷೆಯಲ್ಲಿದ್ದರು. ಅವರನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ವಿಜಯನಗರ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದ್ದು, ಎಂ.ಎಸ್.ದಿವಾಕರ್ ವರ್ಗಾವಣೆ ಮಾಡಲಾಗಿದೆ.
ಬಳ್ಳಾರಿ ಡಿಸಿ ವರ್ಗಾವಣೆ: ಕರ್ನಾಟಕ ಸರ್ಕಾರ ವಿಜಯನಗರ ಪಕ್ಕದ ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸಹ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ನಾಗೇಂದ್ರ ಪ್ರಸಾದ್ ಕೆ. ಐಎಎಸ್ (ಕೆಎನ್:2015) ಬಳ್ಳಾರಿಯ ನೂತನ ಜಿಲ್ಲಾಧಿಕಾರಿಯಾಗಿ ತತ್‌ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ನೇಮಕಗೊಂಡಿದ್ದಾರೆ. ನಾಗೇಂದ್ರ ಪ್ರಸಾದ್ ಕೆ. ನಿರ್ದೇಶಕರು ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆ ನಿರ್ದೇಕರಾಗಿ ಕೆಲಸ ಮಾಡುತ್ತಿದ್ದರು.
ಆದರೆ ಕರ್ನಾಟಕ ಸರ್ಕಾರ ಎಂ.ಎಸ್.ದಿವಾಕರ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾಗೆ ಯಾವುದೇ ಸ್ಥಳವನ್ನು ನಿಯೋಜನೆ ಮಾಡಿಲ್ಲ. ಎಂ.ಎಸ್.ದಿವಾಕರ್ 2023ರ ಜುಲೈನಲ್ಲಿ ವಿಜಯನಗರದ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿದ್ದರು. ಅದಕ್ಕೂ ಮೊದಲು ಜಿಲ್ಲಾಧಿಕಾರಿಯಾಗಿ ವೆಂಕಟೇಶ್ ಟಿ. ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಪ್ರಶಾಂತ್‌ಕುಮಾರ್ ಮಿಶ್ರಾ ಸಹ 2023ರ ಜುಲೈನಲ್ಲಿ ಅಧಿಕಾರವಹಿಸಿಕೊಂಡಿದ್ದರು. ಕರ್ನಾಟಕ ಸರ್ಕಾರ ಸಾಮಾನ್ಯವಾಗಿ ಜಿಲ್ಲಾಧಿಕಾರಿಗಳನ್ನು ಎರಡು ವರ್ಷದ ಬಳಿಕ ವರ್ಗಾವಣೆ ಮಾಡುತ್ತದೆ. ಆದ್ದರಿಂದ ಬಳ್ಳಾರಿ, ವಿಜಯನಗರ ಡಿಸಿ ಬದಲಾವಣೆ ಮಾಡಿದೆ.
ಪ್ರಶಾಂತ್‌ಕುಮಾರ್ ಮಿಶ್ರಾ 2014ನೇ ಬ್ಯಾಚ್‌ನ ಐಎಎಸ್ ಅಧಿಕಾರಿ. ಈ ಹಿಂದೆ ಅವರು ಕೆಎಸ್‌ಆರ್‌ಟಿಸಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಪ್ರಶಾಂತ್ ಕುಮಾರ್ ಮಿಶ್ರಾಗೂ ಮೊದಲು ಪವನ್ ಕುಮಾರ್ ಮಲಪಾಟಿ ಬಳ್ಳಾರಿ ಡಿಸಿ ಆಗಿದ್ದರು.