ವಿಜಯನಗರ: TT ವಾಹನಕ್ಕೆ ಲಾರಿ ಡಿಕ್ಕಿ – ಓರ್ವ ಸಾವು, 12 ಮಂದಿಗೆ ಗಾಯ

ವಿಜಯನಗರ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು 12 ಮಂದಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರ್ಘಟನೆ ನಡೆದಿದೆ. ಮಾಹಿತಿ ಪ್ರಕಾರ, ಬೆಂಗಳೂರಿನಿಂದ ಕೂಡ್ಲಿಗಿ ಕಡೆ ಪ್ರಯಾಣಿಸುತ್ತಿದ್ದ ಟಿಟಿ ವಾಹನಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಲಾರಿ ಹೊಡೆದ ರಭಸಕ್ಕೆ ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ಮಧು (27) ಎಂಬ ಯುವಕ … Continue reading ವಿಜಯನಗರ: TT ವಾಹನಕ್ಕೆ ಲಾರಿ ಡಿಕ್ಕಿ – ಓರ್ವ ಸಾವು, 12 ಮಂದಿಗೆ ಗಾಯ