ಸಿಎಂ ಆಯ್ಕೆ ಮಾಡುವಾಗ ಯಾವ ಒಪ್ಪಂದವೂ ಆಗಿಲ್ಲ

0
3

ಹೊಸಪೇಟೆ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೈಕಮಾಂಡ್ ಸಭೆಯಲ್ಲಿ ಸಿಎಂ ಆಯ್ಕೆ ಮಾಡುವಾಗ ಯಾವ ಒಪ್ಪಂದವೂ ಆಗಿಲ್ಲ, ಸಿಎಂ ಸಿದ್ದರಾಮಯ್ಯ ಅವರನ್ನು ಎಲ್ಲ ಶಾಸಕರು ಯಾವ ಒಪ್ಪಂದವಿಲ್ಲದೇ, ಒಮ್ಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಮಂಗಳವಾರ ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ 110/11 ಕೆವಿ ವಿದ್ಯುತ್ ಉಪ ಕೇಂದ್ರ ಲೋಕಾರ್ಪಣೆ ಮಾಡಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ ಅವರು ರಾಜ್ಯಕ್ಕೆ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ನಮ್ಮ ಪಕ್ಷದವರು, ಬಂದು ಹೋಗುತ್ತಾರೆ, ಪಕ್ಷದ ಹಲವು ಚರ್ಚೆ ಮಾಡುತ್ತೇವೆ, ಇದೇ ವಿಚಾರ, ಅದೇ ವಿಚಾರ ಅಂತ ಏನಿಲ್ಲ.

ಅಧಿಕಾರ ಹಂಚಿಕೆ, ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ. ಸಿಎಲ್‌ಪಿ ಸಭೆಯಲ್ಲಿ ಸಿದ್ದರಾಮಯ್ಯನವರನ್ನು ಆಯ್ಕೆ ಮಾಡಿದಾಗ, 50-50 ಅಂತ ಏನೂ ಚರ್ಚೆಯಾಗಿಲ್ಲ. ಹೆಕಾಂಡ್ ಸಭೆಯಲ್ಲಿ ಶಾಸಕರ ಒಮ್ಮತದಿಂದ ಸಿಎಂ ಅವನ್ನು ಆಯ್ಕೆ ಮಾಡಿದ್ದಾರೆ. ಎಐಸಿಸಿ ಅವರು ಕೂಡ ಬಂದಿದ್ರು, ಎಲ್ಲರೂ ಸಿಎಂ ಸಿದ್ದರಾಮಯ್ಯ ಅಂತ ಹೇಳಿದ್ದಾರೆ. ಒಪ್ಪಂದದ ವಿಚಾರ ನನಗೆ ಗೊತ್ತಿಲ್ಲ ಎಂದರು.

Previous articleಗಗನಯಾತ್ರಿ ಶುಭಾಂಶು ಶುಕ್ಲಾ ಜತೆ ಶಾಲಾ ವಿದ್ಯಾರ್ಥಿಗಳ ಸಂವಾದ
Next articleತಾತ್ಕಾಲಿಕ ಸಿಎಂ ಬೇಡ, ಶಾಶ್ವತ ಸಿಎಂ ಬೇಕು: ಬಿ.ವೈ. ವಿಜಯೇಂದ್ರ

LEAVE A REPLY

Please enter your comment!
Please enter your name here