ವಿಜಯನಗರ: ಖ್ಯಾತ ಚಿತ್ರನಟಿ ರಚಿತಾ ರಾಮ್ ಅವರ ಕಾರು ಚಾಲಕ ಹಂಪಿ ಉತ್ಸವದ ಸಮಾರೋಪ ಸಮಾರಂಭದ ದಿನ ಭಾನುವಾರ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಅವರ ಮೇಲೆ ವಿನಾಕಾರಣ ಹಲ್ಲೆ ಮಾಡಿದ ಘಟನೆ ನಡೆದಿದೆ.
ರವಿಕುಮಾರ್ ಅವರ ಕಣ್ಣಿಗೆ ಮುಷ್ಠಿ ಮಾಡಿ ಗುದ್ದಿದ ವೀಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ. ಭದ್ರತೆಯ ನೆಪದಲ್ಲಿ ಸಾರ್ವಜನಿಕರ ಮೇಲೂ ಅಸಭ್ಯ ಹಾಗೂ ಆಕ್ರಮಣಕಾರಿ ವರ್ತನೆ ತೋರಲಾಗಿದೆ ಎಂದು ಸ್ಥಳದಲ್ಲಿದ್ದವರು ಆರೋಪಿಸಿದ್ದಾರೆ.
ಇದನ್ನೂ ಓದಿ: ಹಂಪಿಯ ವಿರೂಪಾಕ್ಷೇಶ್ವರ ದೇಗುಲದ ಬಳಿ ಚಿರತೆ ಪ್ರತ್ಯಕ್ಷ
ಘಟನೆ ನಡೆಯುತ್ತಿದ್ದಂತೆಯೇ ಸ್ಥಳದಲ್ಲಿ ಗಲಾಟೆ ಜೋರಾಗಿದ್ದು ಜನ ಗುಂಪು ಸೇರಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಚಾಲಕ ದರ್ಪದಿಂದ ಕಾರಿನಿಂದ ಇಳಿದು ಅಧಿಕಾರಿಯತ್ತ ಮುನ್ನುಗ್ಗುತ್ತಿದ್ದ ದೃಶ್ಯಗಳೂ ಸೆರೆಯಾಗಿವೆ.
ವಿಜಯನಗರ ಜಿಲ್ಲಾ ಪೊಲೀಸರು ಪ್ರಕರಣದ ಕುರಿತು ಪರಿಶೀಲನೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯ ಹಾಗೂ ಸಾಕ್ಷಿಗಳ ಹೇಳಿಕೆಗಳ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.






















