ವಿಜಯನಗರ: ಶ್ರೀಕೃಷ್ಣ ದೇವರಾಯ ವಿವಿ ಘಟಿಕೋತ್ಸವ, ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ

0
3

ವಿಜಯನಗರ: ಈ ಶತಮಾನದ ಅಗತ್ಯವೆಂದರೆ ಡಿಜಿಟಲ್ ಸಾಕ್ಷರತೆ, ನವೀನ ಚಿಂತನೆ. ಇದಕ್ಕಾಗಿ ಜೀವನಪರ್ಯಂತ ವಿದ್ಯಾರ್ಥಿಯಾಗುವ ಮೂಲಕ ಕಲಿಯುತ್ತಲೇ ಇರಬೇಕು. “ಆತ್ಮನಿರ್ಭರ ಭಾರತ” ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವಾಗಲು ಯುವಕರು ತಮ್ಮ ಪ್ರತಿಭೆ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮೂಲಕ ಸಮಾಜಕ್ಕೆ ಹೊಸ ದಿಕ್ಕನ್ನು ನೀಡಬೇಕು. ಯುವಪೀಳಿಗೆ ಉದ್ಯೋಗಾಕಾಂಕ್ಷೆ ಬದಲು ಉದ್ಯೋಗ ಒದಗಿಸುವವರ ಪಾತ್ರ ನಿರ್ವಹಿಸಬೇಕು ರಾಜ್ಯಪಾಲ ಥಾವರ್‌ಚಂದ ಗೆಹ್ಲೋಟ್ ಹೇಳಿದರು.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 13ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಬಹುಮುಖ್ಯವಾಗಿ ಜಾಗತಿಕ ದೃಷ್ಟಿಕೋನ ಮತ್ತು ಸಾಮಾಜಿಕ ಜವಾಬ್ದಾರಿಯ ಬಗ್ಗೆ ಜ್ಞಾನ ಬೆಳೆಸಿಕೊಳ್ಳಬೇಕು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು, ರಾಷ್ಟ್ರಗಳು ಶಿಕ್ಷಣ ಸಂಸ್ಥೆಗಳಲ್ಲಿ ನಿರ್ಮಿಸಲ್ಪಟ್ಟಿವೆ ಎಂದು ಹೇಳಿದ್ದಾರೆ.

ಈ ಚಿಂತನೆಯನ್ನು ಮನಸ್ಸಿನಲ್ಲಿಟ್ಟುಕೊಂಡು, ವಿಶ್ವವಿದ್ಯಾಲಯಗಳನ್ನು ಶ್ರೇಷ್ಠತೆಯ ಸಂಸ್ಥೆಗಳನ್ನಾಗಿ ಮಾಡುವುದು ನಮ್ಮ ಗುರಿಯಾಗಿರಬೇಕು. ಇದಕ್ಕಾಗಿ, ವಿಶ್ವವಿದ್ಯಾಲಯಗಳನ್ನು ನಾವೀನ್ಯತೆ, ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಕೇಂದ್ರವನ್ನಾಗಿ ಮಾಡುವ ಮತ್ತು ಅಂತರ-ಶಿಸ್ತಿನ ಮತ್ತು ಅಂತರ-ವಿಶ್ವವಿದ್ಯಾಲಯ ಸಹಯೋಗವನ್ನು ಉತ್ತೇಜಿಸುವ ಕಡೆಗೆ ಕೆಲಸ ಮಾಡುವ ಅವಶ್ಯಕತೆಯಿದೆ ಎಂದರು.

ವಿಶ್ವವಿದ್ಯಾಲಯದ ಆವರಣವನ್ನು ಸ್ವಚ್ಛವಾಗಿಡಲು ಒಂದು ಅಥವಾ ಎರಡು ತಿಂಗಳಿಗೊಮ್ಮೆ ಸ್ವಚ್ಛತಾ ಅಭಿಯಾನವನ್ನು ನಡೆಸಬೇಕು ಎಂದ ರಾಜ್ಯಪಾಲರು, ಭಾರತ `ವಿಶ್ವ ಗುರು’ ಆಗುವತ್ತ ಪಯಣದಲ್ಲಿದೆ. ಇಂದು ದೇಶವು 100ಕ್ಕೂ ಹೆಚ್ಚು ಯುನಿಕಾರ್ನ್ ಸ್ಟಾರ್ಟ್ಪ್‌ಗಳನ್ನು ಹೊಂದಿದೆ. ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯು ವಿಶ್ವದ ಅತ್ಯಂತ ಶಕ್ತಿಶಾಲಿ ವ್ಯವಸ್ಥೆಯಾಗಿದೆ ಮತ್ತು ಚಂದ್ರಯಾನದಿಂದ ಎಐ ವರೆಗಿನ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಪ್ರಮುಖ ಪಾತ್ರ ವಹಿಸುತ್ತಿದ್ದೇವೆ. ಈ ಪ್ರಯಾಣದಲ್ಲಿ ಪ್ರಮುಖ ಶಕ್ತಿ ಯುವಕರು ಎಂದು ಹೇಳಿದರು.

ಘಟಿಕೋತ್ಸವದಲ್ಲಿ ಡಾ.ವಸುಂಧರಾ ಭೂಪತಿ, ಬಿ. ನಾಗನಗೌಡ ಮತ್ತು ಇರ್ಫಾನ್ ರಜಾಕ್ ಅವರಿಗೆ ಶಿಕ್ಷಣ, ಸಾಹಿತ್ಯ, ಆರೋಗ್ಯ ಮತ್ತು ಸಾಮಾಜಿಕ ಕಾರ್ಯ ಕ್ಷೇತ್ರದಲ್ಲಿನ ಅತ್ಯುತ್ತಮ ಕೆಲಸಕ್ಕಾಗಿ ಗೌರವ ಪದವಿಗಳನ್ನು ನೀಡಿ ಗೌರವಿಸಲಾಗಿದೆ. ಅವರಿಗೆ ಅಭಿನಂದಿಸುತ್ತ ಅವರು ಸಮಾಜ, ಜನರು ಮತ್ತು ರಾಷ್ಟ್ರದ ಹಿತದೃಷ್ಟಿಯಿಂದ ಕೆಲಸ ಮಾಡುವುದನ್ನು ಮುಂದವರಿಸಲಿ ಎಂದು ಆಶಿಸುತ್ತೇನೆ ಎಂದರು.

ಗೌರವ ಡಾಕ್ಟರೇಟ್ ಪ್ರದಾನ: ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಬೆಂಗಳೂರಿನ ಉದ್ಯಮಿ ಇರ್ಫಾನ್ ರಜಾಕ್, ಸಂಡೂರಿನ ಸಾಹಿತಿ ಹಾಗೂ ವೈದ್ಯೆ ಡಾ.ವಸುಂಧರಾ ಭೂಪತಿ, ಸಂಡೂರಿನ ಮತ್ತೋರ್ವ ಶೈಕ್ಷಣಿಕ ಉದ್ಯಮಿ ಬಾವಿಹಳ್ಳಿ ನಾಗನಗೌಡರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದರು. ಇದಕ್ಕೂ ಮುನ್ನ ಕುಲಪತಿ ಪ್ರೊ.ಎಂ. ಮುನಿರಾಜು, ರಿಜಿಸ್ಟಾರ್ ನಾಗರಾಜ, ಎನ್‌ಎಂ ಸಾಲಿ ಗೌರವ ಡಾಕ್ಟರೇಟ್‌ಗೆ ಭಾಜನರಾದವರನ್ನು ಪರಿಚಯಿಸಿದರು.

Previous articleಬಾಗಲಕೋಟೆ: ಇಳಕಲ್‌ ಮಹಿಳೆಗೆ ನೈಜೀರಿಯನ್ ಆರೋಪಿ ದೋಖಾ

LEAVE A REPLY

Please enter your comment!
Please enter your name here