ವಿಜಯಪುರದಲ್ಲಿ ಕ್ಯಾಂಪಾ ಕೋಲಾ ಘಟಕ ಸ್ಥಾಪನೆಗೆ ವೇಗ

0
5

ಸಂಪೂರ್ಣ ಸಹಕಾರದ ಭರವಸೆ – ಸಚಿವ ಎಂ.ಬಿ. ಪಾಟೀಲ್

ವಿಜಯಪುರ: ವಿಜಯಪುರದಲ್ಲಿ ಕ್ಯಾಂಪಾ ಕೋಲಾ ಉತ್ಪಾದನಾ ಘಟಕವನ್ನು ಶೀಘ್ರವಾಗಿ ಸ್ಥಾಪಿಸುವ ಸಂಬಂಧ ಕಂಪನಿಯ ಉನ್ನತ ಮಟ್ಟದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಸಂಸ್ಥೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕ್ಯಾಂಪಾ ಕೋಲಾ ಸಂಸ್ಥೆಯೊಂದಿಗೆ ನಡೆದ ಮಾತುಕತೆ ಸಕಾರಾತ್ಮಕವಾಗಿದ್ದು, ವಿಜಯಪುರದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ವಿಜಯಪುರದ ಕೈಗಾರಿಕೀಕರಣಕ್ಕೆ ವೇಗ ನೀಡುವ ಮೊದಲ ಪ್ರಮುಖ ಕಂಪನಿಗಳಲ್ಲೊಂದಾಗಿ ಕ್ಯಾಂಪಾ ಕೋಲಾ ಹೊರಹೊಮ್ಮುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ FIR

ಕ್ಯಾಂಪಾ ಕೋಲಾ ಘಟಕ ಸ್ಥಾಪನೆಯಿಂದ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ಹೆಚ್ಚಾಗಲಿದ್ದು, ಪ್ರಾದೇಶಿಕ ಆರ್ಥಿಕತೆಗೆ ಉತ್ತೇಜನ ದೊರೆಯಲಿದೆ. ಮೂಲಸೌಕರ್ಯ ಅಭಿವೃದ್ಧಿ, ಸರಬರಾಜು ಸರಪಳಿ, ಸಾರಿಗೆ ಹಾಗೂ ಸಹಾಯಕ ಉದ್ಯಮಗಳಿಗೆ ಹೊಸ ಚೈತನ್ಯ ಸಿಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಈಗಾಗಲೇ ಸರದಿಯಲ್ಲಿ ಇರುವ ನಾಲ್ಕು–ಐದು ಪ್ರಮುಖ ಕಂಪನಿಗಳು ವಿಜಯಪುರಕ್ಕೆ ಆಗಮಿಸಲು ಕ್ಯಾಂಪಾ ಕೋಲಾ ಯೋಜನೆ ಪ್ರೇರಕವಾಗಲಿದೆ. ಕೈಗಾರಿಕಾ ಹೂಡಿಕೆಗಳನ್ನು ಆಕರ್ಷಿಸಲು ಸರ್ಕಾರವು ಅಗತ್ಯ ಅನುಮತಿಗಳು, ಭೂಮಿ, ವಿದ್ಯುತ್, ನೀರು ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಸುಗಮಗೊಳಿಸಲು ಬದ್ಧವಾಗಿದೆ ಎಂದು ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣ ಮೆಕ್ಸಿಕೋದಲ್ಲಿ ರೈಲು ದುರಂತ: 13 ಸಾವು, 98 ಜನರಿಗೆ ಗಾಯ

ವಿಜಯಪುರವನ್ನು ಕೈಗಾರಿಕಾ ಹಬ್ ಆಗಿ ರೂಪಿಸುವ ದಿಕ್ಕಿನಲ್ಲಿ ಈ ಬೆಳವಣಿಗೆ ಮಹತ್ವದ್ದಾಗಿದ್ದು, ಉತ್ತರ ಕರ್ನಾಟಕ ಭಾಗದ ಸಮತೋಲಿತ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Previous articleದಕ್ಷಿಣ ಮೆಕ್ಸಿಕೋದಲ್ಲಿ ರೈಲು ದುರಂತ: 13 ಸಾವು, 98 ಜನರಿಗೆ ಗಾಯ