ವಿಜಯಪುರ: ಭೀಮಾತೀರದ ರೌಡಿಶೀಟರ್ ದೇವರ ನಿಂಬರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ದೇವರ ನಿಂಬರಗಿ ಗ್ರಾಮದಲ್ಲಿ ನಡೆದಿದೆ.
ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದ ಬಳಿ ಇರುವ ಕಟಿಂಗ್ ಶಾಪ್‌ನಲ್ಲಿ ಕಟಿಂಗ್ ಮಾಡಿಕೊಳ್ಳಲು ಬಂದಿದ್ದ ದೇವರ ನಿಂಬರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಮೇಲೆ ಗುಂಡಿನ ದಾಳಿ ನಡೆದಿದ್ದು, ಐದು ಸುತ್ತು ಗುಂಡು ಹಾರಿಸಲಾಗಿದೆ.
ಮೃತ ಭೀಮನಗೌಡನ ತಲೆಗೆ ಗುಂಡು ತಗುಲಿದ್ದು, ಕಣ್ಣಿಗೆ ಕಾರದ ಪುಡಿ ಎರಚಿ ರಾಡ್ ಸೇರಿದಂತೆ ಮಾರಕಾಸ್ತ್ರಗಳಿಂದ ಮನ ಬಂದಂತೆ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.