Home Advertisement
Home ನಮ್ಮ ಜಿಲ್ಲೆ ವಿಜಯಪುರ ಯತ್ನಾಳಗೆ ಸ್ವಾಭಿಮಾನ ಇದ್ದರೆ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲಿ

ಯತ್ನಾಳಗೆ ಸ್ವಾಭಿಮಾನ ಇದ್ದರೆ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲಿ

0
77

ವಿಜಯಪುರ: ಬಿಜೆಪಿಯಿಂದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಸ್ವಾಭಿಮಾನ, ಮರ್ಯಾದೆ ಇದ್ದರೆ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲಿ, ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸುತ್ತಿದೆ, ಅವರ ವಿರುದ್ಧ ಟೀಕಾ ಪ್ರಹಾರ ನಡೆಸುವ ಅವರು ಈಗ ಅವರ ನೇತೃತ್ವದಲ್ಲಿ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಾರೆಯೇ? ಅಥವಾ ಮರಳಿ ಪಕ್ಷಕ್ಕೆ ತೆಗೆದುಕೊಳ್ಳಿ ಎಂದು ಬಿಜೆಪಿ ನಾಯಕರಿಗೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆಯೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ. ಎಂ.ಬಿ. ಪಾಟೀಲ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತು ಎತ್ತಿದರೆ ಸಾಕು ಯಡಿಯೂರಪ್ಪ ಕುಟುಂಬ, ವಿಜಯೇಂದ್ರ ಎಂದು ವಾಗ್ದಾಳಿ ನಡೆಸುವ ಅವರು ಈಗ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಚುನಾವಣೆಗೆ ಹೇಗೆ ಬೆಂಬಲ ನೀಡುತ್ತಾರೆ? ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತರೆ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಿಶ್ಚಿತವಾಗಿ ಬದಲಾಗುತ್ತಾರೆ. ವಿಜಯೇಂದ್ರ ಬದಲಾವಣೆ ಆಗೋದು ಯತ್ನಾಳಗೆ ಬೇಕಾಗಿದೆಯೋ, ಇಲ್ಲವೋ? ಅವರು ಅರ್ಥ ಮಾಡಿಕೊಳ್ಳಲಿ. ಯತ್ನಾಳ ಉದ್ದೇಶ ವಿಜಯೇಂದ್ರ ಉಳಿಸುವುದೇ ಆಗಿದ್ದರೆ ಮಾತು ಮಾತಿಗೆ ಯಡಿಯೂರಪ್ಪ ಮಗ ಎಂದು ಹೇಳುವುದೇಕೆ ಎಂದು ಪ್ರಶ್ನಿಸಿದರು.

ಉಪಚುನಾವಣೆಯಲ್ಲಿ ಪ್ರಚಾರ ಮಾಡಿ ವಾಪಸ್ ಬಿಜೆಪಿ ಹೋಗುವ ಯೋಚನೆ ಯತ್ನಾಳರಲ್ಲಿದೆ. ಈ ಉಪ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದೇನೆ ಎಂದು ಹೇಳಿ ಪುನಃ ಪಕ್ಷಕ್ಕೆ ಮರಳುವ ಪ್ಲಾನ್ ಮಾಡುತ್ತಿದ್ದಾರೆ ಅಷ್ಟೇ ಎಂದರು.