Home Advertisement
Home ನಮ್ಮ ಜಿಲ್ಲೆ ವಿಜಯಪುರ ವಿಜಯಪುರದಲ್ಲೂ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ

ವಿಜಯಪುರದಲ್ಲೂ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ

0
16

ವಿಜಯಪುರ: ರಾಜ್ಯ ಸಚಿವ ಸಂಪುಟ ಅನುಮೋದಿಸಿರುವ 56,432 ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಲು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಗುರುವಾರ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು.

ದಾರಿಯುದ್ದಕ್ಕೂ ನೂರಾರು ಉದ್ಯೋಗಾಕಾಂಕ್ಷಿಗಳು `ಖಾಲಿ ಹುದ್ದೆ ಭರ್ತಿ ಮಾಡಿ’, ಸರ್ಕಾರಿ ಹುದ್ದೆ ಭರ್ತಿ ಮಾಡಿ – ಉದ್ಯೋಗಿಗಳ ಹಿತ ಕಾಪಾಡಿ’ ಎಂಬಿತ್ಯಾದಿ ಸಂದೇಶಗಳ ಫಲಕಗಳನ್ನು ಪ್ರದರ್ಶಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಿದರು. ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ರ‍್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿತು.

ಇದನ್ನೂ ಓದಿ: ನಿಮ್ಮ ಮನಗೆಲ್ಲಲು ಬರ್ತಿದೆ ಹೊಸ ಕತೆ ʻರಾಣಿʼ

ನೇತೃತ್ವ ವಹಿಸಿದ್ದ ಎಐಡಿವೈಓ ರಾಜ್ಯಾಧ್ಯಕ್ಷ ಶರಣಪ್ಪ ಉದ್ಬಾಳ ಮಾತನಾಡಿ, ನಿರುದ್ಯೋಗ ಸಮಸ್ಯೆಯ ಗಂಭೀರತೆಯಿಂದಾಗಿ ಕಳೆದ ಐದಾರು ತಿಂಗಳಿನಿಂದ ರಾಜ್ಯಾದ್ಯಂತ ಉದ್ಯೋಗ ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ. ಅದರ ಪರಿಣಾಮವಾಗಿ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಿದ್ದರು ಹಾಗೂ 56,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಅಧಿವೇಶನ ಮುಗಿದು 3-4 ತಿಂಗಳು ಕಳೆದರೂ ಇನ್ನೂ ಕೂಡ ಯಾವುದೇ ನೇಮಕಾತಿ ಪ್ರಕ್ರಿಯೆ ಆರಂಭವಾಗಿಲ್ಲ. ಹೀಗಾಗಿ ವಯೋಮಿತಿ ಸಡಿಲಿಕೆ ಮಾಡಿದರೂ ಅದರ ಅನುಕೂಲ ಆಗದೆ ಇರುವುದರಿಂದ ಉದ್ಯೋಗ ಆಕಾಂಕ್ಷಿಗಳು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ. 56,432 ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆಗೆ ಸ್ವಾಗತ, ಆದರೆ ಕಾಲ ವಿಳಂಬ ಮಾಡದೆ ಕೂಡಲೇ ಈ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದರು.