Home ನಮ್ಮ ಜಿಲ್ಲೆ ವಿಜಯಪುರ ವಿಜಯಪುರ: ಹಳೆ ವೈಷಮ್ಯ ಜೋಡಿ ಕೊಲೆ

ವಿಜಯಪುರ: ಹಳೆ ವೈಷಮ್ಯ ಜೋಡಿ ಕೊಲೆ

0

ವಿಜಯಪುರ : ಹಳೆ ವೈಷಮ್ಯ ಹಿನ್ನೆಲೆ ಇಬ್ಬರು ಯುವಕರನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕನ್ನೂರ ಗ್ರಾಮದಲ್ಲಿ ನಡೆದಿದೆ.

ವಿಜಯಪುರ ತಾಲೂಕಿನ ಕನ್ನೂರ್ ಗ್ರಾಮದಲ್ಲಿ ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24) ಎಂಬುವರ ಜೋಡಿ ಕೊಲೆ ನಡೆದಿದ್ದು, ಅಪರಿಚಿತ ವ್ಯಕ್ತಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ.

ಹತ್ಯೆಯಾಗಿರುವ ಸಾಗರ್ ಹಾಗೂ ಇಸಾಕ್ ಎರಡು ವರ್ಷಗಳ ಹಿಂದೆ ತಮ್ಮೂರಿನ ಈರನಗೌಡ ಮೇಲೆ ತೀವ್ರ ಹಲ್ಲೆ ಮಾಡಿದ್ದರಿಂದ ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದು ಈರಣಗೌಡ ಮೃತಪಟ್ಟಿದ್ದ‌‌ ಈ ದ್ವೇಷದ ಕಾರಣ ಇಬ್ಬರ ಕೊಲೆ ನಡೆದಿರೋ‌ ಸಂಶಯ ವ್ಯಕ್ತವಾಗಿದ್ದು, ವಿಜಯಪುರ ಗ್ರಾಮೀಣ ಪೋಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version