Home Advertisement
Home ನಮ್ಮ ಜಿಲ್ಲೆ ಯಾದಗಿರಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

0
6

ಯಾದಗಿರಿ: ಅಪ್ರಾಪ್ತ ಬಾಲಕಿ ಜತೆ ಅನುಚಿತ ವರ್ತನೆ ತೋರಿದ ಹಿನ್ನಲೆಯಲ್ಲಿ ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ಸ್ವಯಂ ದೇವ ಮಾನವ ಮಲ್ಲಿಕಾರ್ಜುನ ಮುತ್ಯಾ (25) ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೂರು ನೀಡಿದ್ದು, ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ʻವಿರೋಶ್‌ʼ ಜೋಡಿ

7 ವರ್ಷದ ಬಾಲಕಿಯ ಜೊತೆ ಮಲ್ಲಿಕಾರ್ಜುನ ಮುತ್ಯಾ ಅನುಚಿತವಾಗಿ ವರ್ತನೆ ತೋರಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಎಲ್ಲಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿ, ಈ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿತ್ತು.

Previous articleರೈಲ್ವೆ ಮತ್ತು ಜಲಶಕ್ತಿ ಇಲಾಖೆಯಲ್ಲಿ ಅಭಿವೃದ್ಧಿ ಪರ್ವ