Home Advertisement
Home ನಮ್ಮ ಜಿಲ್ಲೆ ಯಾದಗಿರಿ ಪೊಲೀಸರ ವಿಚಾರಣೆಗೆ ಮಲ್ಲಿಕಾರ್ಜುನ ಮುತ್ಯಾ ಹಾಜರ್

ಪೊಲೀಸರ ವಿಚಾರಣೆಗೆ ಮಲ್ಲಿಕಾರ್ಜುನ ಮುತ್ಯಾ ಹಾಜರ್

0
58

ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಕ್ಸೋ ಪ್ರಕರಣದಲ್ಲಿ ಮಹಲರೋಜ ಮಠದ ಮಲ್ಲಿಕಾರ್ಜುನ ಮುತ್ಯಾ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ಫೆ. 28ರಂದು ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಮುತ್ಯಾ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಮಾ. 4ರ ಬುಧವಾರ ರಾತ್ರಿ ಶಹಾಪುರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಬುಧವಾರ ರಾತ್ರಿ ಶಹಾಪುರ ಸಿಪಿಐ ಕಚೇರಿಗೆ ಬಂದಿದ್ದ ಮುತ್ಯಾಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದರು. ಅದರಂತೆ ಗುರುವಾರ ಮಧ್ಯಾಹ್ನ 3 ಗಂಟೆಯ ವಿಚಾರಣೆಗೆ ಹಾಜರಾದರು.

ಇದನ್ನೂ ಓದಿ: T20 World Cup: ಇಂಗ್ಲೆಂಡ್‌ಗೆ 254 ರನ್‌ ಟಾರ್ಗೆಟ್

2ನೇ ನೋಟಿಸ್ ನೀಡುವ ಎಲ್ಲಾ ಸಂಭವ ಇರುವ ಹಿನ್ನೆಲೆಯಲ್ಲಿ ಪ್ರಕರಣದ ತೀವ್ರತೆ ಅರಿತ ಮುತ್ಯಾ ತನಿಖಾಧಿಕಾರಿ ಶಹಾಪುರ ಗ್ರಾಮೀಣ ಸಿಪಿಐ ಶರಣಗೌಡ ನ್ಯಾಮಣ್ಣನವರ ಅವರ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗಿದೆ.

ಕಳೆದ ಮಂಗಳವಾರ ಇಲ್ಲಿಯ ಪ್ರಧಾನ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಮುತ್ಯಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯು ನ್ಯಾಯಾಧೀಶರು ಮಾ. 6 ಶುಕ್ರವಾರಕ್ಕೆ ಮುಂದೂಡಿದ್ದರು. ವಿಚಾರಣೆಯ ಒಂದು ದಿನ ಮುಂಚಿತವಾಗಿ ಮುತ್ಯಾ ಪೊಲೀಸರ ಮುಂದು ಹಾಜರಾಗಿದ್ದು, ಶುಕ್ರವಾರ ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆ ಇದೆ.