Home ನಮ್ಮ ಜಿಲ್ಲೆ ಯಾದಗಿರಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಶವವಾಗಿ ಪತ್ತೆ: ಅಪಹರಿಸಿ ಕೊಲೆಗೈದ ಶಂಕೆ

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಶವವಾಗಿ ಪತ್ತೆ: ಅಪಹರಿಸಿ ಕೊಲೆಗೈದ ಶಂಕೆ

0

ಯಾದಗಿರಿ: ದೀಪಾವಳಿ ದಿನದಂದು ಕಾಣೆಯಾಗಿದ್ದ ವಿದ್ಯಾರ್ಥಿನಿ ಕಾಲುವೆಯಲ್ಲಿ ಶವಯಾಗಿ ಪತ್ತೆಯಾಗಿದ್ದು, ಅಪಹರಿಸಿ ಕೊಲೆ ಮಾಡಿರುವ ಅನುಮಾನ ಪಾಲಕರಿಂದ ವ್ಯಕ್ತವಾಗಿದೆ.

ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಸೌಜನ್ಯ (17) ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಅ.21 ರ ಮಂಗಳವಾರದಂದು ಕಾಣೆಯಾಗಿದ್ದ ಶನಿವಾರ ಶವವಾಗಿ ಶಹಾಪುರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಪತ್ತೆಯಾಗಿದೆ.

ಅಪಹರಣ ಮಾಡಿ ಕೊಲೆ ಮಾಡಿದ್ದಾರೆ ಎಂದು ಪಾಲಕರು ಆರೋಪಿಸಿದ್ದು, ಚಿರು, ಪಾಂಡಾ ಹಾಗೂ ರಾಜೇಶ್ ಎನ್ನುವವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಮೂವರು ಕಾರಿನಲ್ಲಿ ಬಂದು ಅಪಹರಣ ಮಾಡಿದ್ದಾರೆ ಎಂದು ಮೃತಳ ತಂದೆ ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರ ಮೇಲೆ ಗ್ರಾಮಸ್ಥರ ಆಕ್ರೋಶ : ಶನಿವಾರ ಸಂಜೆ ಮೃತ ಸೌಜನ್ಯಳ ಶವ ಆಂಬುಲೆನ್ಸ್ ನಲ್ಲಿ ಗ್ರಾಮಕ್ಕೆ ತರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಹುಣಸಗಿ ಸಿಪಿಐ ವಾಹನ ತಡೆದು ಮಗಳ ಸಾವಿಗೆ ನ್ಯಾಯ ಕೊಡಬೇಕೆಂದು ಆಗ್ರಹಿಸಿ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದರು.

ಸಾಜನ್ಯ ಕಾಣೆಯಾದ ಬಗ್ಗೆ ದೂರು ನೀಡಲು ಹೋದಾಗ ಬೇಗ ಮಾಡಿಕೊಂಡಿಲ್ಲ ಎಂದು ಕಿಡಿಕಾರಿದರು. ಇವರ ಹೋರಾಟಕ್ಕೆ ಬಿಜೆಪಿ ಮುಖಂಡ ಬಬ್ಲೂಗೌಡ ಸಾಥ್ ನೀಡಿದರು.ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ನ್ಯಾಯ ಕೊಡಿಸಬೇಕು, ಆರೋಪಿಗಳ ಬಂಧಿಸಿಸುವಂತೆ ಪೋಷಕರ ಒತ್ತಾಯಿಸಿದ್ದಾರೆ.

ಈಗಾಗಲೇ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿ ಬಂದ ನಂತರ ಸಾವಿನ ಕಾರಣ ಹೊರಬೀಳಲಿದೆ. ಒಂದು ವೇಳೆ ಕೊಲೆಯಾಗಿದ್ದಾರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
: ರವಿಕುಮಾರ್, ಸಿಪಿಐ ಹುಣಸಗಿ

NO COMMENTS

LEAVE A REPLY

Please enter your comment!
Please enter your name here

Exit mobile version