Home Advertisement
Home ನಮ್ಮ ಜಿಲ್ಲೆ ಯಾದಗಿರಿ ಯಾದಗಿರಿಯಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್ ಸ್ಥಾಪನೆ

ಯಾದಗಿರಿಯಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್ ಸ್ಥಾಪನೆ

0
28

ಯಾದಗಿರಿ: ಕಲಬುರಗಿ ಜಿಲ್ಲೆಯ ಪಕ್ಕದಲ್ಲಿರುವ ಯಾದಗಿರಿ ಜಿಲ್ಲೆ ತನ್ನದೇ ಆದ ವೈಶಿಷ್ಟ್ಯಗಳನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ಇಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸುವ ಉದ್ದೇಶವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಸಚಿವ ಸಂಪುಟ ಸದಸ್ಯರಾದ ಡಾ. ಶರಣಪ್ರಕಾಶ ಪಾಟೀಲ ಅವರು ತಿಳಿಸಿದ್ದಾರೆ.

ಯಾದಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಯಿಮ್ಸ್) ಆವರಣದಲ್ಲಿ ಶನಿವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪ್ರಶ್ನೆಗಳಿಗೆ ಉತ್ತರ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. “ಸಾರ್ವಜನಿಕ ಹಿತಾಸಕ್ತಿ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರಶ್ನೆ ಕೇಳಿದರೆ ಉತ್ತರ ನೀಡುತ್ತೇನೆ,” ಎಂದು ಹೇಳಿದರು.

ಇದನ್ನೂ ಓದಿ: ಉಡುಪಿ: ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಯಾದಗಿರಿ ಮೆಡಿಕಲ್ ಕಾಲೇಜಿನಲ್ಲಿ ಸಿಬ್ಬಂದಿಗಳ ಭರ್ತಿಗೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಸರ್ಕಾರದ ನಿಯಮಾನುಸಾರ ಹೊರಗುತ್ತಿಗೆ ಆಧಾರಿತ ಹುದ್ದೆಗಳ ಭರ್ತಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ನೂತನ ಸಂಸ್ಥೆಯಾಗಿರುವುದರಿಂದ ಆಡಳಿತಾತ್ಮಕ, ತಾಂತ್ರಿಕ ಹಾಗೂ ಶೈಕ್ಷಣಿಕ ಅಂಶಗಳ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸಲಾಗುತ್ತಿದೆ. ಈ ಕುರಿತು ಎಲ್ಲಾ ಮಾಹಿತಿಯನ್ನು ಆಡಳಿತ ಮಂಡಳಿಗೆ ನೀಡಲಾಗಿದೆ ಎಂದು ಅವರು ಹೇಳಿದರು.

ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಲೋಕಾರ್ಪಣೆ ನೆರವೇರಲಿದೆ ಎಂದು ಸಚಿವರು ಮಾಹಿತಿ ನೀಡಿದರು. ಇದರಿಂದ ಉತ್ತರ ಕರ್ನಾಟಕ ಭಾಗದ ಜನರಿಗೆ ಉತ್ತಮ ಹೃದ್ರೋಗ ಚಿಕಿತ್ಸಾ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು.

ಇದನ್ನೂ ಓದಿ: ದಾವಣಗೆರೆ ಮಾಜಿ ಶಾಸಕ ಮೋತಿ ವೀರಣ್ಣ ನಿಧನ

ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಬಡವರು, ಕೂಲಿ ಕಾರ್ಮಿಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಸಹ ವೈದ್ಯರಾಗಬೇಕೆಂಬ ಕನಸು ನನಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ ಎಂದು ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಚನ್ನಾರೆಡ್ಡಿ ಪಾಟೀಲ ತನ್ನೂರ್, ಯಿಮ್ಸ್ ಡೀನ್ ಸಂದೀಪ್ ವಿ.ಎಚ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಅನಪುರ, ಯಾದಗಿರಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಕನ್ನಡ ಭಾಷಿಕರಿಗೆ ಸೂಕ್ತ ಸ್ಥಾನಮಾನದ ಭರವಸೆ

ಯಾದಗಿರಿಯಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಸ್ಥಾಪನೆಯಿಂದ ಜಿಲ್ಲೆಯ ಆರೋಗ್ಯ ಸೇವಾ ವ್ಯವಸ್ಥೆಗೆ ಹೊಸ ಆಯಾಮ ದೊರೆಯಲಿದ್ದು, ಸಾರ್ವಜನಿಕ ವಲಯದಲ್ಲಿ ಸಂತಸ ವ್ಯಕ್ತವಾಗಿದೆ.

Previous articleದಾವಣಗೆರೆ ಮಾಜಿ ಶಾಸಕ ಮೋತಿ ವೀರಣ್ಣ ನಿಧನ