Home Advertisement
Home ತಾಜಾ ಸುದ್ದಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸುವುದೇ ಡಿಕೆಶಿ ದಂಧೆ

ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸುವುದೇ ಡಿಕೆಶಿ ದಂಧೆ

0
196
ಯತ್ನಾಳ

ಬೆಳಗಾವಿ(ಚಿಕ್ಕೋಡಿ): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಬಿಜೆಪಿ ನಾಯಕರಿಗೆ ಮೊದಲಿನಿಂದಲು ಕರೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡುತ್ತಿದ್ದಾರೆ. ಅವರು ಮೊದಲಿನಿಂದಲೂ ಅದೇ ದಂಧೆ ಮಾಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದರು.
ಪಟ್ಟಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳು ಇಲ್ಲದೆ ಇರುವದರಿಂದ ಕಾಂಗ್ರೆಸ್‌ನವರು ಈ ರೀತಿ ಮಾಡುತ್ತಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷದವರನ್ನು ಕರೆದು ಟಿಕೆಟ್ ಕೊಡುತ್ತೇನೆ ಎಂದು ಹೇಳುತ್ತಿದ್ದಾರೆ. ಈ ಬಾರಿ ರಾಜ್ಯದಲ್ಲಿ ಮತ್ತೆ ನೂರಕ್ಕೆ ನೂರರಷ್ಟು ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಪಕ್ಷವನ್ನು ಬಿಟ್ಟು ಯಾರೂ ಹೋಗುವುದಿಲ್ಲ. ಯಾರಾದರು ಹೋಗ್ತಾರೆ ಅಂದರೆ ಅವರದ್ದು ಎಲ್ಲವೂ ಮುಗಿದಿದೆ ಅಂತ ಅರ್ಥ ಎಂದರು.