ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಗೃಹ ಸಚಿವರ ಭೇಟಿ

ಮಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ ಕುಟುಂಬದೊಂದಿಗೆ ಕಾರ್ಕಳ ತಾಲೂಕಿನ ಐತಿಹಾಸಿಕ ಬೆಳ್ಮಣ್ಣು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಉಪಸ್ಥಿತರಿದ್ದ ಸಚಿವರು, ಕುಟುಂಬ ಸಮೇತವಾಗಿ ದೇಗುಲದಲ್ಲಿ ನಡೆಯುತ್ತಿದ್ದ ವಿಶೇಷ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು. ಚಂಡಿಕಾ ಹೋಮದ ಜೊತೆಗೆ ದೇಗುಲದಲ್ಲಿ ನಡೆಯುತ್ತಿದ್ದ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಮತ್ತು ಪೂಜೆಗಳಲ್ಲಿ ಭಕ್ತಿಯಿಂದ ಭಾಗವಹಿಸಿದರು.
ದೇವಸ್ಥಾನದ ಆಡಳಿತ ಮಂಡಳಿ ಮತ್ತು ಅರ್ಚಕರು ಸಚಿವರನ್ನು ಬರಮಾಡಿಕೊಂಡು, ಅವರಿಗೆ ವಿಶೇಷ ಪೂಜೆಗಳ ಬಗ್ಗೆ ಮಾಹಿತಿ ನೀಡಿದರು. ಈ ಭೇಟಿಯು ಮುಂಚಿತವಾಗಿ ನಿಗದಿಯಾಗಿದ್ದ ಖಾಸಗಿ ಕಾರ್ಯಕ್ರಮವಾಗಿದ್ದು, ಸಚಿವರು ಯಾವುದೇ ರಾಜಕೀಯ ಅಥವಾ ಅಧಿಕೃತ ಸಭೆಗಳಲ್ಲಿ ಭಾಗವಹಿಸಲಿಲ್ಲ.