ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆಗೆ ನಿಷೇಧ

0
8

ಬೆಂಗಳೂರು: ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ ಹೊರಡಿಸಿದೆ.
ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್‌ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ.

Previous articleಟಿಪ್ಪರ್‌ಗೆ ಡಿಕ್ಕಿ ಹೊಡೆದ ಕಾರು: ಕಿಮೀ ದೂರ ಎಳೆದೊಯ್ದ ಚಾಲಕ
Next articleಹಿಪ್ಪರಗಿ ಜಲಾಶಯಕ್ಕೆ 12 ಸಾವಿರ ಕ್ಯುಸೆಕ್ ನೀರು