SK Home Ad
Home ನಮ್ಮ ಜಿಲ್ಲೆ ಹುಬ್ಬಳ್ಳಿಯಲ್ಲಿ ಮತ್ತೆ ಮರ್ಡರ್‌: ಹಾಡಹಗಲೇ ವ್ಯಕ್ತಿಯನ್ನು ಕೊಚ್ಚಿ ಮೂವರು ಪರಾರಿ

ಹುಬ್ಬಳ್ಳಿಯಲ್ಲಿ ಮತ್ತೆ ಮರ್ಡರ್‌: ಹಾಡಹಗಲೇ ವ್ಯಕ್ತಿಯನ್ನು ಕೊಚ್ಚಿ ಮೂವರು ಪರಾರಿ

0
103

ಹುಬ್ಬಳ್ಳಿ: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ ಮತ್ತೆ ಹಾಡಹಗಲೇ ಭೀಕರ ಕೊಲೆ ನಡೆದಿದೆ.

ಲಿಂಗರಾಜನಗರದ ಬನಶಂಕರಿ ಬಡಾವಣೆ ಬಳಿ ಶುಕ್ರವಾರ ಮಧ್ಯಾಹ್ನ ವ್ಯಕ್ತಿಯೊಬ್ಬನನ್ನು ಮೂವರು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ತಲವಾರ್‌ನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಕೊಲೆಯಾದ ವ್ಯಕ್ತಿ ದಾದಾಪೀರ್ ಇಸ್ಮಾಯಿಲ್‌ಸಾಬ್ ಉದಯಕರ್ (33). ಮೂಲತಃ ಹುಬ್ಬಳ್ಳಿಯ ಗಿರಿಯಾಲ್ ರಸ್ತೆಯ ಶಿವಸೋಮೇಶ್ವರ ನಗರದವರಾಗಿದ್ದು, ಸದ್ಯ ಕಲಘಟಗಿ ತಾಲೂಕಿನ ಭೋಗೇನಾಗರಕೊಪ್ಪದಲ್ಲಿ ವಾಸವಾಗಿದ್ದರು.

2015ರಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ದಾದಾಪೀರ್ ಆರೋಪಿಯಾಗಿದ್ದ. ಅದೇ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರು ಮತ್ತು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.