ಜಮೀರ್‌ಗೆ 2.5 ಕೋಟಿ ಸಾಲ: ರಾಧಿಕಾ ಕುಮಾರಸ್ವಾಮಿ ವಿಚಾರಣೆ

0
49

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್‌ಗೆ 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಸಾಲ ನೀಡಿದ ವ್ಯಕ್ತಿಗಳ ಪಟ್ಟಿ ಸಿಕ್ಕಿದೆ.

ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಇದ್ದ ಕಾರಣ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ರಾಧಿಕಾ, ದಶಕದ ಹಿಂದೆ ತಾವು ಸಚಿವ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಒಪ್ಪಿಕೊಂಡು ಹೇಳಿಕೆ ದಾಖಲಿಸಿದ್ದಾರೆ.

2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್ ಖಾನ್ ಅವರ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿತ್ತು.

ಇಡಿ ವರದಿಯ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ಖಾನ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಅಸ್ತಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು.

ಎಸಿಬಿ ರದ್ದಾದ ಬಳಿಕ ಈ ಪ್ರಕರಣ ತನಿಖೆಯೂ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.

ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು.

ವಿಚಾರಣೆ ಸಂದರ್ಭದಲ್ಲಿ, “ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂಗಳನ್ನು ಸಾಲವಾಗಿ ನೀಡಿದ್ದೆ” ಎಂದು ರಾಧಿಕಾ ವಿಚಾರಣೆ ವೇಳೆ ತಿಳಿಸಿದ್ದಾರೆ ಎನ್ನಲಾಗಿದೆ.

Previous articleಬೆಂಗಳೂರ: ಸರ್ಕಾರಿ ಆಸ್ಪತ್ರೆಗಳಲ್ಲಿ ಇಸ್ಕಾನ್‌ನ ಪೌಷ್ಟಿಕ ಆಹಾರ ಆರಂಭ
Next articleದಾವಣಗೆರೆ: ಶಾಮನೂರು ಮನೆ ಕಾಯುವ ಎಸ್ಪಿ – ಶಾಸಕ ಹರೀಶ್ ಟೀಕೆ

LEAVE A REPLY

Please enter your comment!
Please enter your name here