ನಟ ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಇತ್ತಿಚೆಗೆ ‘ಕೊತ್ತಲವಾಡಿ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿ ಸೈ ಎನಿಸಿ ಕೊಂಡಿದ್ದರು. ಈಗ ಅನುಷ್ಕಾ ಶೆಟ್ಟಿ ಅಭಿನಯದ ಘಾಟಿ ಸಿನಿಮಾವನ್ನು ಕರ್ನಾಟಕದಲ್ಲಿ ವಿತರಣೆ ಮಾಡಲು ಸಜ್ಜಾಗಿದ್ದಾರೆ. PA ಪ್ರೊಡಕ್ಷನ್ಸ್ ಮೂಲಕ ಅವರು ಸಿನಿಮಾ ಹಂಚಿಕೆ ಕೂಡ ಆರಂಭಿಸಿದ್ದಾರೆ.
ಮಹಿಳಾ ಪ್ರಧಾನ ಸಿನಿಮಾ ಆಗಿರುವ ಅನುಷ್ಕಾ ಶೆಟ್ಟಿ ಅಭಿನಯದ ಘಾಟಿ ಸಿನಿಮಾವನ್ನು ಪುಷ್ಪಾ ಅರುಣ್ ಕುಮಾರ್ ಅವರು PA ಪ್ರೊಡಕ್ಷನ್ಸ್ ಲಾಂಛನದಲ್ಲಿ ಥ್ರೂ ಶ್ರೀಧರ್ ಕೃಪ ಕಂಬೈನ್ಸ್ ಮೂಲಕ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಹಂಚಿಕೆ ಮಾಡಲಿದ್ದಾರೆ. ಸೆಪ್ಟೆಂಬರ್ 5 ರಂದು ತೆರೆಕಾಣಲಿದೆ. ‘ಕೊತ್ತಲವಾಡಿ’ ಚಿತ್ರದ ಮೂಲಕ ನಿರ್ಮಾಣ ಆರಂಬಿಸಿದ್ದರು. ಈಗ ಘಾಟಿ ಸಿನಿಮಾ ಮೂಲಕ ರಾಜ್ಯದಲ್ಲಿ ವಿತರಣೆ ಮಾಡುವ ಮೂಲಕ ಚಿತ್ರ ವಿತರಣೆಯನ್ನು ಆರಂಬಿಸಿದ್ದಾರೆ.
ʼಫಾಟಿʼ ಚಿತ್ರದ ಮೂಲಕ ಸಿನಿಮಾ ವಿತರಣೆ ಆರಂಭಿಸುತ್ತಿದ್ದೇವೆ. ಮುಂದೆ ಕೂಡ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು PA ಪ್ರೊಡಕ್ಷನ್ಸ್ ಮೂಲಕ ವಿತರಣೆ ಮಾಡುತ್ತೇವೆ. ಚಿತ್ರ ನಿರ್ಮಾಣಕ್ಕೆ ಬಂದಾಗ ತಾವು ತೋರಿದ ಪ್ರೀತಿಗೆ ಅನಂತ ಧನ್ಯವಾದ. ಈಗ ವಿತರಕಿಯಾಗಿ ಹೊಸ ಹೆಜ್ಜೆ ಇಡುತ್ತಿದ್ದೇನೆ. ತಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಪುಷ್ಪ ಅರುಣ್ ಕುಮಾರ್ ತಿಳಿಸಿದ್ದಾರೆ.
ಅನುಷ್ಕಾ ಶೆಟ್ಟಿಯ ಘಾಟಿ: ಕ್ರಿಶ್ ಜಗರ್ಲಮುಡಿ ನಿರ್ದೇಶನದ ಹಾಗೂ ನಟಿ ಅನುಷ್ಕಾ ಶೆಟ್ಟಿ ಅವರ ಬಹು ನೀರಿಕ್ಷಿತ ಚಿತ್ರವಾದ ಘಾಟಿ ಚಿತ್ರವು ತೆಲುಗು, ತಮಿಳು, ಮಲೆಯಾಳಂ, ಹಿಂದಿ ಹಾಗೂ ಕನ್ನಡ ಸೇರದಂತೆ ಬಹು ಭಾಷೆಯಲ್ಲಿ ಬಿಡುಗಡೆ ಆಗುತ್ತಿದೆ. ಸೆಪ್ಟೆಂಬರ್ 5 ರಂದು ತೆರೆಕಾಣಲಿದೆ.