ಅಭಿಮಾನಿಗಳ ಒತ್ತಡಕ್ಕೆ ಮಣಿದ ಚಿತ್ರತಂಡ
ದರ್ಶನ್ ನಟನೆಯ ‘ದಿ ಡೆವಿಲ್’ ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಡಿಸೆಂಬರ್ 12 ರಂದು ವಿಶ್ವಾದ್ಯಂತ ತೆರೆಕಾಣಬೇಕಿತ್ತು. ಆದರೆ ಚಿತ್ರತಂಡ ಇದೀಗ ಬಿಡುಗಡೆ ದಿನಾಂಕವನ್ನು ಕೊಂಚ ಬದಲಿಸಿದೆ. ದರ್ಶನ್ ಅಭಿಮಾನಿಗಳ ಒತ್ತಡಕ್ಕೆ ಮಣಿದು ಈ ನಿರ್ಧಾರಕ್ಕೆ ಬಂದಿರುವುದಾಗಿ ಚಿತ್ರತಂಡ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ.
ಇದೀಗ ಹೊಸ ದಿನಾಂಕವನ್ನು ಪ್ರಕಟಿಸಿದ್ದು, ಅದರಂತೆ ಡಿಸೆಂಬರ್ 11 ರಂದು ತೆರೆಕಾಣಲಿದೆ. ಇತ್ತೀಚೆಗೆ ‘ಡೆವಿಲ್’ ಚಿತ್ರತಂಡ ಸಭೆ ಏರ್ಪಡಿಸಿತ್ತು. ಅಲ್ಲಿ ‘ಡೆವಿಲ್’ ಚಿತ್ರತಂಡದ ಜತೆ ದರ್ಶನ್ ಪರವಾಗಿ ಅವರ ಪತ್ನಿ ವಿಜಯಲಕ್ಷ್ಮಿ ಹಾಜರಿದ್ದು, ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಜತೆಗೆ ಈ ಸಿನಿಮಾ ಪ್ರಚಾರದ ಜವಾಬ್ದಾರಿಯನ್ನು ಅವರ ಹೆಗಲಿಗೆ ಹಾಕಿದ್ದಾರೆ ಎನ್ನಲಾಗಿದೆ. ಆ ಸಭೆಯಲ್ಲಿ ಚರ್ಚೆ ನಡೆದ ಬಳಿಕ ಚಿತ್ರತಂಡ ಒಮ್ಮತದ ತೀರ್ಮಾನಕ್ಕೆ ಬಂದು, ಇದೀಗ ‘ಡೆವಿಲ್’ ದರ್ಶನವನ್ನು ಒಂದು ದಿನ ಮೊದಲೇ ಮಾಡಿಸಲು ಅಣಿಯಾಗಿದೆ.
ಶ್ರೀ ಜೈ ಮಾತಾ ಕಂಬೈನ್ಸ್ ಲಾಂಛನದಲ್ಲಿ ಜೆ.ಜಯಮ್ಮ ಹಾಗೂ ಸರೇಗಮ ಜಂಟಿಯಾಗಿ ನಿರ್ಮಿಸಿದ್ದಾರೆ. ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ತಶ್ವಿನಿ ವೀರ್ ಕಾರ್ಯಕಾರಿ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ದರ್ಶನ್ ಜೋಡಿಯಾಗಿ ರಚನಾ ರೈ ನಟಿಸಿದ್ದು, ತುಳಸಿ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ ಪ್ರಭು, ಶೋಭರಾಜ್ ಈ ಚಿತ್ರದ ತಾರಾಗಣದಲ್ಲಿದ್ದಾರೆ.
