Home Advertisement
Home ಸಿನಿ ಮಿಲ್ಸ್ ಉತ್ತರ ಕರ್ನಾಟಕ ಸೊಗಡಿನ ‘ಹುಬ್ಬಳ್ಳಿ ಹಂಟರ್ಸ್’ ಮೊದಲ ಹಂತ ಪೂರ್ಣ

ಉತ್ತರ ಕರ್ನಾಟಕ ಸೊಗಡಿನ ‘ಹುಬ್ಬಳ್ಳಿ ಹಂಟರ್ಸ್’ ಮೊದಲ ಹಂತ ಪೂರ್ಣ

0
67

ಹುಬ್ಬಳ್ಳಿ: ಕನ್ನಡದ ಸೂಪರ್ ಹಿಟ್ ಸಿನಿಮಾ ‘ಬೆಲ್ ಬಾಟಮ್’ ನಿರ್ಮಾಪಕ ಸಂತೋಷ್ ಕುಮಾರ್ ಕೆಸಿ ಅವರ ಹೊಸ ನಿರ್ಮಾಣದ ಚಿತ್ರ ‘ಹುಬ್ಬಳ್ಳಿ ಹಂಟರ್ಸ್’ ಮೊದಲ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ತಮ್ಮದೇ ‘ಗೋಲ್ಡನ್ ಹಾರ್ಸ್ ಸಿನಿಮಾ’ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಸಮರ್ಥ್ ಬಿ. ಕಡ್ಕೋಲ್ ನಿರ್ದೇಶನ ವಹಿಸಿದ್ದಾರೆ.

ಈ ಹಿಂದೆ ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರದ ಮೂಲಕ ಗಮನ ಸೆಳೆದಿದ್ದ ಸಮರ್ಥ್ ಬಿ. ಕಡ್ಕೋಲ್, ಇದೀಗ ‘ಹುಬ್ಬಳ್ಳಿ ಹಂಟರ್ಸ್’ ಮೂಲಕ ಮತ್ತೊಂದು ವಿಭಿನ್ನ ಕಥೆಯನ್ನು ತೆರೆಗೆ ತರುತ್ತಿದ್ದಾರೆ.

ಇದನ್ನೂ ಓದಿ: ‘ಹೃದಯಂ’: ಇದು ‘ಉಡಾಳ’ನ ಹೃದಯದ ವಿಷಯ

ಹುಬ್ಬಳ್ಳಿ ನಗರದಲ್ಲಿ ಮುಹೂರ್ತ ನೆರವೇರಿಸಿಕೊಂಡಿದ್ದ ಚಿತ್ರತಂಡ, ಸತತ 14 ದಿನಗಳ ಕಾಲ ನಗರದಲ್ಲಿ ಚಿತ್ರೀಕರಣ ನಡೆಸಿ ಮೊದಲ ಹಂತದ ಶೂಟಿಂಗ್ ಪೂರ್ಣಗೊಳಿಸಿದೆ. ಮಾರ್ಚ್ ತಿಂಗಳಲ್ಲಿ ಎರಡನೇ ಹಂತದ ಶೂಟಿಂಗ್ ಆರಂಭಿಸಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ.

ಈ ಚಿತ್ರದಲ್ಲಿ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಪ್ರಮೋದ್ ಶೆಟ್ಟಿ ಹಾಗೂ ‘ಮಹಾನಟಿ’ ಖ್ಯಾತಿಯ ಧನ್ಯಶ್ರೀ ಸುಜಿತ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಇದಲ್ಲದೆ, ಭಾರತದಾದ್ಯಂತ ಖ್ಯಾತಿ ಪಡೆದ ಹಲವಾರು ಕಂಟೆಂಟ್ ಕ್ರಿಯೇಟರ್ಸ್ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿರುವುದು ವಿಶೇಷ ಆಕರ್ಷಣೆಯಾಗಿದೆ.

ಇದನ್ನೂ ಓದಿ: ಕಂಬಳದ ಇತಿಹಾಸಕ್ಕೆ ಜೀವ ತುಂಬಿದ ವೀರೇಂದ್ರ ಹೆಗ್ಗಡೆ: ವೀರ ಕಂಬಳ ಚಿತ್ರ ತೆರೆಗೆ ಸಿದ್ಧ

‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಕಥೆ ಉತ್ತರ ಕರ್ನಾಟಕದ ಸೊಗಡನ್ನು ಒಳಗೊಂಡಿದ್ದು, ಸ್ಥಳೀಯ ಸಂಸ್ಕೃತಿ, ಭಾಷೆ ಮತ್ತು ಜೀವನಶೈಲಿಯನ್ನು ನೈಜವಾಗಿ ತೆರೆಗೆ ತರುವ ಪ್ರಯತ್ನ ಮಾಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.

ಚಿತ್ರಕ್ಕೆ ಸಮರ್ಥ್ ಅವರ ಕಥೆ ಇದ್ದು, ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಹಾಗೂ ಚೇತನ್ ಮರಂಬೀದ್ ಅವರೊಂದಿಗೆ ಸಂಭಾಷಣೆ ಬರೆಯಲಾಗಿದೆ. ಅಭಿಮನ್ಯು ಸದಾನಂದನ್ ಛಾಯಾಗ್ರಹಣ, ಪ್ರಸನ್ನ ಕೇಶವ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಉತ್ತರ ಕರ್ನಾಟಕದ ಹಿನ್ನೆಲೆಯೊಂದಿಗೆ ಹೊಸ ಪ್ರಯೋಗಕ್ಕೆ ಮುಂದಾಗಿರುವ ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾ ಮೇಲೆ ಪ್ರೇಕ್ಷಕರಲ್ಲಿ ಈಗಾಗಲೇ ಹೆಚ್ಚಿನ ನಿರೀಕ್ಷೆ ಮೂಡಿದೆ.

Previous article‘ಹೃದಯಂ’: ಇದು ‘ಉಡಾಳ’ನ ಹೃದಯದ ವಿಷಯ
Next articleʻಧುರಂಧರ್‌ʼ ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: ಆಗಿದ್ದೇನು?